Latestಜಿಲ್ಲಾ ಸುದ್ದಿ

ಬೆಳೆ ಪರಿಹಾರ ನೀಡಲು ಶೀಘ್ರ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದ್ದು, ಬೆಳೆ ಪರಿಹಾರ ನೀಡಲು ಶೀಘ್ರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡುತ್ತಿದ ಅವರು. ಬೆಳೆ ಹಾನಿಯನ್ನು ಸಮೀಕ್ಷೆ ಮಾಡಲಾಗುತ್ತಿದ್ದು, ಬೆಳೆ ಹಾನಿಯಿಂದ ತರಕಾರಿ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಬಗ್ಗೆ ಕಣ್ಣಿರಿಸಲಾಗಿದ್ದು, ಭತ್ತದ ಹಾಗೂ ಇತರೆ ಧಾನ್ಯಗಳ ಎಂ.ಎಸ್.ಪಿ ಖರೀದಿ ಕುರಿತು ಮಹತ್ವದ ಸಭೆಯನ್ನು ನಡೆಸಲಾಗುತ್ತಿದೆ. ಈ ಬಗ್ಗೆ ನಿಗಾ ಇಡಲಾಗಿದೆ ಎಂದರು.

ಶೀಘ್ರಗಾಗಿ ಹಾಳಾಗುವ ವಸ್ತುಗಳ ಬಗ್ಗೆಯೂ ಸಂಪೂರ್ಣ ವರದಿ ಸಲ್ಲಿಸುವಂತೆ ತೋಟಗಾರಿಕೆ ಮತ್ತು ಕೃಷಿ ಇಲಾಖೆಗೆ ಸೂಚಿಸಿದೆ ಎಂದು ತಿಳಿಸಿದರು.

ಬೆಳೆ ಪರಿಹಾರದ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯ ಅವರು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಯಿಸುತ್ತಾ, ಅವರು ಪತ್ರ ಬರೆಯುವ ಮೊದಲೇ ಬೆಳೆ ಸಮೀಕ್ಷೆ ಮಾಡಿ ಕೂಡಲೇ ಪರಿಹಾರ ನೀಡಲು ಎಲ್ಲ ಕ್ರಮಗಳನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button