
ಕೊರೊನಾ ಅಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈಗಾಗಲೇ ಅನೇಕ ಸೆಲೆಬ್ರಿಟಿಗಳಿಗೆ ಕೊರೊನಾ ತಗುಲಿದೆ. ಇದೀಗ ರಜನಿಕಾಂತ್ ಪುತ್ರಿ ಐಶ್ವರ್ಯಾ ಅವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಇತ್ತೀಚೆಗಷ್ಟೇ ನಟ ಧನುಷ್ ಜೊತೆ ವಿಚ್ಛೇದನವಾಗಿತ್ತು. ನಂತರ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದೆ.
ಅವರಿಗೆ ಕೊರೊನಾ ವೈರಸ್ ತಗುಲಿರುವ ಬಗ್ಗೆ ಐಶ್ವರ್ಯಾ ರಜನಿಕಾಂತ್ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.ಮಂಗಳವಾರ ರಾತ್ರಿ ಅವರು ಈ ಕುರಿತು ಪೋಸ್ಟ್ ಮಾಡಿದ್ದಾರೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇನ್ನು ಎಲ್ಲ ಮುಂಜಾಗ್ರತೆಗಳನ್ನು ತೆಗೆದುಕೊಂಡಿದ್ದರೂ ಕೂಡ ಕೊರೊನಾ ಪಾಸಿಟಿವ್ ಆಗಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ದಯವಿಟ್ಟು ಎಲ್ಲರೂ ಮಾಸ್ಕ್ ಧರಿಸಿ. ವ್ಯಾಕ್ಸಿನ್ ಪಡೆದು ಹುಷಾರಾಗಿರಿ’ ಎಂದು ಐಶ್ವರ್ಯಾ ಅವರು ಪೋಸ್ಟ್ ಮಾಡಿದ್ದಾರೆ.




