Breaking NewsLatestಜಿಲ್ಲಾ ಸುದ್ದಿರಾಮನಗರ
ಸರ್ಕಾರಿ ಆಸ್ಪತ್ರೆಗೆ ಸಂಕಷ್ಟ; ನವಜಾತ ಶಿಶು ಸಾವು

ರಾಮನಗರ : ಜಿಲ್ಲೆಯ ಚನ್ನಪಟ್ಟಣ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಸ್ಪತ್ರೆಯ ಬಾತ್ ರೂಮ್ ನಲ್ಲಿ ಎಸೆದು ಹೋಗಿರುವ ಕಿರಾತಕರು ಎರಡು ದಿನಗಳ ಹಿಂದೆ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆಯಾಗಿದ್ದು, ಹೆಣ್ಣು ಮಗು ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ಮಕ್ಕಳ ಅಭಿವೃದ್ಧಿ ಅಧಿಕಾರಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಇನ್ನು ಆಸ್ಪತ್ರೆಯಲ್ಲಿ ಯಾವುದೇ ಗರ್ಭಪಾತದ ಕೇಸ್ ಇಲ್ಲ ಎಂದು ಮಾಹಿತಿ ಸಿಕ್ಕಿದೆ. ಹೊರಗಿನಿಂದ ತಂದು ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಇದರಲ್ಲಿ ಆಸ್ಪತ್ರೆಯ ಕೆಲ ಸಿಬ್ಬಂದಿ ವರ್ಗ ಶಾಮೀಲಾಗಿರುವ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಚನ್ನಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
