Breaking NewsLatestಮನರಂಜನೆಸಿನಿಮಾಸೆಲೆಬ್ರಿಟಿಸ್ಯಾಂಡಲ್ ವುಡ್

ರಶ್ಮಿಕಾ ಮಂದಣ್ಣಗೆ ಹುಟ್ಟುಹಬ್ಬದ ಸಂಭ್ರಮ

ಕಿರಿಕ್ ಪಾರ್ಟಿ ಚಿತ್ರದ ಸಾನ್ವಿ ಪಾತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ. ಸಣ್ಣ ವಯಸ್ಸಿನಲ್ಲೇ ಬಣ್ಣದ ಲೋಕದಲ್ಲಿ ಮಿಂಚು ಹರಿಸಿರುವ ನಟಿ ಯಾರೂ ಊಹಿಸದ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಕನ್ನಡ ಚಿತ್ರದ ಮೂಲಕ ಸಿನಿ ಜರ್ನಿ ಆರಂಭಿಸಿದ ರಶ್ಮಿಕಾ ಮಂದಣ್ಣ ಸದ್ಯ ಟಾಲಿವುಡ್ ಜೊತೆಗೆ ಬಾಲಿವುಡ್ ನಲ್ಲೂ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ.

ಇಂಡಸ್ಟ್ರಿಗೆ ಎಂಟ್ರಿಕೊಟ್ಟ ಆರಂಭದಲ್ಲಿಯೇ ಸ್ಟಾರ್ ನಟರ ಜೊತೆ ನಟಿಸಿ ಸೈ ಎನಿಸಿಕೊಂಡಿರುವ ಕೊಡಗಿನ ಕುವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ರಶ್ಮಿಕಾ ಹುಟ್ಟುಹಬ್ಬಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ.

ಇಂದು ರಶ್ಮಿಕಾ ಮಂದಣ್ಣರ 26ನೇ ವರ್ಷದ ಹುಟ್ಟುಹಬ್ಬ. 20ನೇ ವರ್ಷಕ್ಕೆ ಚಿತ್ರರಂಗಕ್ಕೆ ಕಾಲಿಟ್ಟ ರಶ್ಮಿಕಾ ಕೇವಲ ಆರೇ ಆರು ವರ್ಷದಲ್ಲಿ ಯಾರು ನಿರೀಕ್ಷಿಸಿರದ ಮಟ್ಟಿಗಿನ ಸಕ್ಸಸ್ ತಲುಪಿದ್ದಾರೆ. ಟಾಲಿವುಡ್ ನ ಟಾಪ್ ಒನ್ ನಟಿಯರ ಸಾಲಿನಲ್ಲಿ ರಶ್ಮಿಕಾ ಹೆಸರು ಕೇಳಿ ಬರುತ್ತಿದೆ.

2021ರ ಕೊನೆಯಲ್ಲಿ ತೆರೆಗೆ  ಬಂದ  ‘ಪುಷ್ಪ’ ಸಿನಿಮಾದಲ್ಲಿ ರಶ್ಮಿಕಾ ನಿರ್ವಹಿಸಿರುವ ಶ್ರೀವಲ್ಲಿ ಪಾತ್ರ ಅಭಿಮಾನಿಗಳಿಗೆ ಸಖತ್ ಇಷ್ಟವಾಗಿತ್ತು. ಸದ್ಯ, ರಶ್ಮಿಕಾ ‘ಮಿಷನ್ ಮಜ್ನು’, ‘ಗುಡ್ಬೈ’ ಹಾಗೂ ‘ಪುಷ್ಪ 2’ ಚಿತ್ರಗಳಲ್ಲಿ ನಟಿಸುತ್ತಿದ್ದು ಸ್ಟಾರ್ ನಟರು ರಶ್ಮಿಕಾರೇ ಬೇಕು ಎನ್ನುವಷ್ಟರ ಮಟ್ಟಿಗೆ ಕೊಡಗಿನ ಕುವರಿ ಡಿಮ್ಯಾಂಡ್ ಕ್ರಿಯೇಟ್ ಮಾಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button