IPL 2022Latestಕ್ರಿಕೆಟ್

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್ ಸಿ ಬಿ ರೋಚಕ ಗೆಲುವು

ಮುಂಬೈ: ಡಾ. ಡಿ.ವೈ ಪಾಟೀಲ್ ಸ್ಫೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಐಪಿಎಲ್ 2022ರ (IPL 2022) ಆರನೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs KKR) ತಂಡ 3 ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು.


ಬುಧವಾರ ರಾತ್ರಿ ಡಿ ವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಕೋಲ್ಕತಾ ನೈಟ್ ರೈಡರ್ಸ್ ತಂಡ 18.5 ಓವರ್ಗಳಿಗೆ 128 ರನ್ಗಳಿಗೆ ಆಲ್ಔಟ್ ಆಗಿತ್ತು. ಬಳಿಕ ಗುರಿ ಹಿಂಬಾಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನೂ ನಾಲ್ಕು ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ದಡ ಸೇರಿತ್ತು.


ಲೋ ಸ್ಕೋರ್ ಗೇಮ್ ಆಗಿದ್ದರೂ ಆರ್ಸಿಬಿ ಕೆಕೆಆರ್ ವಿರುದ್ಧದ ಈ ಪಂದ್ಯವನ್ನು ಸುಲಭವಾಗಿ ಗೆಲ್ಲುವ ಬದಲು ತನ್ನ ಕೈಯಾರೆ ಜಠಿಲ ಮಾಡಿಕೊಂಡಿತು. ಕೊನೆಯ ಓವರ್ ವರೆಗೂ ಜಯ ಯಾರ ಮಡಿಲಿಗೆ ಎಂದು ಹೇಳಲು ಗೊಂದಲವಾಗಿಯೇ ಉಳಿಯಿತು.

Spread the love

Related Articles

Leave a Reply

Your email address will not be published. Required fields are marked *

Back to top button