Breaking NewsLatestಮೆಟ್ರೋ

ಕಂದಾಯ ಸಚಿವ ಆರ್​ ಅಶೋಕ್​​​ಗೆ ಕೊರೊನಾ ಪಾಸಿಟಿವ್ ​​​​​​: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ ಕಂದಾಯ ಸಚಿವ ಆರ್.ಅಶೋಕ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಟ್ವೀಟ್​​ ಮಾಡಿರುವ ಸಚಿವರು, ನನಗೆ ಕೋವಿಡ್ ದೃಢವಾಗಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

ನಿನ್ನೆ ಸಚಿವ ಸಂಪುಟ ಸಭೆಗೂ ಅಶೋಕ್ ಗೈರಾಗಿದ್ದರು. ಈ ಹಿಂದೆ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೂ ಕೊರೊನಾ ಪಾಸಿಟಿವ್​ ಕಂಡು ಬಂದಿತ್ತು.

ಕರ್ನಾಟಕದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆ (ಗುರುವಾರ) 5,031 ಕೊರೊನಾ ಪ್ರಕರಣಗಳು ದೃಢಪಟ್ಟಿತ್ತು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತೀ ಹೆಚ್ಚು 4,324 ಪ್ರಕರಣ ವರದಿಯಾಗಿತ್ತು. ಹಾಗೆಯೇ 107 ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 333 ಕ್ಕೆ ಏರಿಕೆಯಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button