
ರಾಕಿಂಗ್ ಸ್ಟಾರ್ ಯಶ್ ಅಭಿಯನದ ಕೆಜಿಎಫ್ -2 ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗಾಗಲೇ ಈ ಸಿನಿಮಾ ಅಭಿಮಾನಿಗಳ ಮುಂದೆ ಬರಬೇಕಿತ್ತು. ಆದರೆ ಕೊರೊನಾ ಮಹಾಮಾರಿಯಿಂದ ಸಿನಿಮಾಕ್ಕೆ ಅಡೆಚಣೆ ಉಂಟಾಗಿದೆ.

ಇದೀಗ ಈ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದ್ದು, ಕೊನೆಯ ಹಂತದ ಕೆಲಸದಲ್ಲಿ ನಿರತರಾಗಿದ್ದಾರೆ. ಸದ್ಯ ಯಶ್ ಕುಂದಾಪುರದಲ್ಲಿ ಬೀಡುಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಯಶ್ ಕುಂಭಾಶಿ ಆನೆಗುಡ್ಡೆ ದೇವಸ್ಥಾನಕ್ಕೆ ಭೇಟಿ ನೀಡಿದರು. ನಿನ್ನೆ ರವಿ ಬಸ್ರೂರ್ ಮನೆಗೆ ಭೇಟಿ ನೀಡಿ ಅಲ್ಲಿನ ಸ್ಥಳೀಯರ ಜೊತೆ ಕ್ರಿಕೆಟ್ ಆಡಿದ್ದರು.

ಇಂದು ಮುಂಜಾನೆ ಯಶ್ ಕುಂಭಾಶಿ ಆನೆಗುಡ್ಡೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಅವರ ಜೊತೆಗೆ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರು ಕೂಡ ಭೇಟಿ ನೀಡಿದರು. ನಂತರ ಚಿತ್ರತಂಡ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ

ರಾಕಿಂಗ್ ಸ್ಟಾರ್ ಯಶ್ ಅವರು ಮೂಕಾಂಬಿಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅವರ ಜೊತೆಗೆ ನಿರ್ದೇಶಕರು ಮತ್ತು ನಿರ್ಮಾಪಕರು , ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಾಥ್ ನೀಡಿದರು.



