ಸಂಪೂರ್ಣ ಮಳೆಯಿಂದ ಹಾನಿಯಾದವರಿಗೆ 1 ಲಕ್ಷ ರೂಪಾಯಿ ಪರಿಹಾರ: ಸಿಎಂ ಬೊಮ್ಮಾಯಿ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವಂತ ಮಹಾಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಅನೇಕ ಜಿಲ್ಲೆಗಳಲ್ಲಿ ಬೆಳೆ ಹಾನಿ ಜೊತೆಗೆ, ಮನೆ ಹಾನಿಗೊಂಡಿವೆ. ಸಂಪೂರ್ಣ ಮನೆಹಾನಿಗೊಂಡಿದ್ದರೇ 1 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಸುದ್ದಿಗಾರೊಂದಿಗೆ ಮಾಹಿತಿ ನೀಡಿರುವ ಅವರು, ರಾಜ್ಯದಲ್ಲಿ ಮಳೆಯಿಂದ ಆದಂತ ಹಾನಿಯ ಸಂಬಂಧ ಬೆಳೆ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರ ನೀಡಲಾಗುವುದು. ಭಾರೀ ಮಳೆಯಿಂದಾಗಿ ಪೂರ್ಣ ಮನೆ ಹಾನಿಯಾಗಿದ್ದರೇ 1 ಲಕ್ಷ ರೂ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಲು ಸೂಚಿಸಿದ್ದೇನೆ ಎಂದು ತಿಳಿಸಿದರು.
ರಾಜ್ಯಾದ್ಯಂತ ಅಕಾಲಿಕ ಮಳೆಯಿಂದ ಸಾಕಷ್ಟು ಬೆಳೆಹಾನಿ, ಆಸ್ತಿಪಾಸ್ತಿ ನಷ್ಟ, ಜನ-ಜಾನುವಾರುಗಳು ಪ್ರಾಣ ಕಳೆದುಕೊಂಡಿದ್ದಾರೆ. 685 ಕೋಟಿ ರೂಪಾಯಿ ಪರಿಹಾರ ನೀಡುವ ಬಗ್ಗೆ ನಾನು ತಕ್ಷಣದ ವರದಿಯನ್ನು ಅಧಿಕಾರಿಗಳ ಬಳಿ ಕೇಳಿದ್ದೇನೆ ಎಂದರು.
ಬೆಂಗಳೂರು ನಗರದಾದ್ಯಂತ ಗುಂಡಿ ಬಿದ್ದಿರುವ ರಸ್ತೆಗಳ ರಿಪೇರಿಗೆ ಮತ್ತು ಸೇತುವೆಗಳ ನಿರ್ಮಾಣಕ್ಕೆ 500 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಹ ತಿಳಿಸಿದರು.



