Breaking NewsLatestವಿದೇಶಸುದ್ದಿ

Russia-Ukraine Crisis: ರಷ್ಯಾ ವಿರುದ್ಧದ ಖಂಡನಾ ನಿರ್ಣಯದ ಮತದಾನದಿಂದ ದೂರ ಉಳಿದ ಭಾರತ..!

ನವದೆಹಲಿ: ರಷ್ಯಾ ದಾಳಿಗೆ ಯುಕ್ರೇನ್‌ ಅಕ್ಷರಶಃ ನಲುಗಿ ಹೋಗಿದೆ. ನೂರಾರು ಸಂಖ್ಯೆಯಲ್ಲಿ ನಾಗರಿಕರು, ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆ ರಷ್ಯಾದ ಆಕ್ರಮಣಾಕಾರಿ ನೀತಿಯನ್ನು ಖಂಡಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಲಾಯಿತು. ಆದರೆ ನಿರ್ಣಯದಲ್ಲಿ ಮತ ಚಲಾಯಿಸುವುದರಿಂದ ಭಾರತ ದೂರವೇ ಉಳಿದಿದೆ.

ಉಕ್ರೇನ್‌ ವಿರುದ್ಧ ರಷ್ಯಾ ನಡೆಸುತ್ತಿರುವ ಆಕ್ರಮಣವನ್ನು ಖಂಡಿಸುವ ವಿಚಾರಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಿದ್ದ ನಿರ್ಣಯದಲ್ಲಿ ಮತದಾನಕ್ಕೆ ಭಾರತ ಶನಿವಾರ ಗೈರು ಹಾಜರಾಗಿದೆ. ನಿರೀಕ್ಷೆಯಂತೆ ಚೀನಾ ಕೂಡಾ ರಷ್ಯಾದ ವಿರುದ್ಧ ಮತದಾನದಿಂದ ದೂರ ಉಳಿದಿದೆ.

ಯುಎನ್‌ಎಸ್‌ಸಿ ಸಭೆಯಲ್ಲಿ ಭಾಗವಹಿಸಿದ್ದ ಭಾರತ ಹಿಂಸಾಚಾರ ಮತ್ತು ದ್ವೇಷವನ್ನು ತಕ್ಷಣವೇ ನಿಲ್ಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕೆಂದು ಭಾರತವು ಒತ್ತಾಯಿಸಿದ್ದು, ವಿವಾದಗಳನ್ನು ಇತ್ಯರ್ಥ ಮಾಡಲು ಮಾತುಕತೆಯೊಂದೇ ದಾರಿ ಎಂದಿದೆ.

ವಿಶ್ವಸಂಸ್ಥೆಯಲ್ಲಿ ಭಾರತ ಕಾಯಂ ಪ್ರತಿನಿಧಿಯಾದ ಟಿ.ಎಸ್. ತಿರುಮೂರ್ತಿ ಮಾತನಾಡಿ, ಉಕ್ರೇನ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಭಾರತವು ವಿಚಲಿತವಾಗಿದೆ. ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಉತ್ತಮ ಮಾರ್ಗವನ್ನು ಕಂಡುಕೊಳ್ಳಬೇಕಾಗಿದೆ. ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳನ್ನು ಇತ್ಯರ್ಥಗೊಳಿಸಲು ಮಾತುಕತೆಯೊಂದೇ ಉತ್ತರವಾಗಿದೆ ಎಂದು ಹೇಳಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button