
ವಿಚ್ಛೇದನದ ಬಳಿಕ ನಟಿ ಸಮಂತಾ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಸಿನಿಮಾರಂಗದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಇದೆ. ಅಷ್ಟೇ ಅಲ್ಲದೆ ಪರಭಾಷೆಗಳಿಂದಲೂ ಆಫರ್ ಗಳು ಬರುತ್ತೀವೆ. ಇತ್ತೀಚೆಗೆ ಪುಷ್ಪಾ ಸಿನಿಮಾದಲ್ಲಿ ಐಟಂ ಸಾಂಗ್ ಗೆ ಸಖತ್ ಹೆಜ್ಜೆ ಹಾಕಿದ ಸಮಂತಾಗೆ ಬೇರೆ ಬೇರೆ ಸಿನಿಮಾಗಳಿಂದ ಆಫರ್ ಬರುತ್ತೀವೆ.
ಇನ್ನು ಸಮಂತಾ ಅವರು ತಮ್ಮ ಜೀವನವನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಈಗಾಗಲೆ ಅವರು ಸಾಕಷ್ಟು ಕಡೆಗಳಲ್ಲಿ ಪ್ರವಾಸಕ್ಕೆ ತೆರಳಿ ಲೈಫ್ ನ ಮಸ್ತಿ ಮಾಡುತ್ತಿದ್ದಾರೆ. ಈ ಬಾರಿ ಸಮಂತಾ ಅವರು ಕೇರಳದ ಆದಿರಪ್ಪಳ್ಳಿ ಜಲಪಾತಕ್ಕೆ ಭೇಟಿ ನೀಡಿದ್ದಾರೆ. ಜಲಪಾತದ ಪಕ್ಕದಲ್ಲಿ ಕುಳಿತು ಅವರು ಪೋಸ್ ನೀಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಸಖತ್ ವೈರಲ್ ಆಗುತ್ತಿದೆ.

ಸಮಂತಾ ಫೋಟೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಅವರ ಫೋಟೋಗೆ ಕಮೆಂಟ್ಗಳನ್ನು ಅಭಿಮಾನಿಗಳು ಹಾಕುತ್ತಿದ್ದಾರೆ. ಅವರು ಎಂಜಾಯ್ ಮಾಡುತ್ತಿರುವ ರೀತಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಸಮಂತಾ ಏರ್ಪೋರ್ಟ್ನಲ್ಲಿ ಸಖತ್ ಆಗಿ ಡ್ಯಾನ್ಸ್ ಮಾಡಿದ್ದರು. ದಳಪತಿ ವಿಜಯ್ ಹಾಗೂ ಪೂಜಾ ಹೆಗ್ಡೆ ನಟನೆಯ ‘ಬೀಸ್ಟ್’ ಚಿತ್ರದ ಹಾಡಿಗೆ ಸಮಂತಾ ಸ್ಟೆಪ್ ಹಾಕಿದ್ದರು. ಈ ವಿಡಿಯೋ ಸಖತ್ ವೈರಲ್ ಆಗಿತ್ತು.



