Latestಮನರಂಜನೆಸಿನಿಮಾ

ಇಬ್ಬರು ಮಕ್ಕಳನ್ನು ದತ್ತು ಪಡೆದ ಕಿಸ್ ಬ್ಯೂಟಿ ಶ್ರೀಲೀಲಾ

ಕಿಸ್‌ ಸಿನಿಮಾದ ಮೂಲಕ ನಟಿ ಶ್ರೀಲೀಲಾ ಅವರು ಹೆಚ್ಚು ಜನಪ್ರಿಯರಾಗಿದ್ದರು. ನಂತರ ಶ್ರೀಮುರಳಿ ಅಭಿನಯದ ಭರಾಟೆ ಚಿತ್ರದಲ್ಲಿ ನಟಿಸಿ ಪ್ರೇಕ್ಷಕರ ಮನಗೆದಿದ್ದರು. ಸದ್ಯ ಅವರ ಬತ್ತಳಿಕೆಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಇದೀಗ ಬೈ ಟು ಲವ್‌ ಸಿನಿಮಾ ರಿಲೀಸ್‌ ಗೆ ರೆಡಿಯಾಗಿದೆ. ಹೀಗಾಗಿ ಅವರು ಚಿತ್ರದ ಪ್ರಮೋಷನ್‌ ನಲ್ಲಿ ತೊಡಗಿಕೊಂಡಿದ್ದಾರೆ.


ಶ್ರೀಲೀಲಾ ಅವರು ಸಿನಿಮಾ ಹೊರತಾಗಿ ಮತ್ತೊಂದು ವಿಷಯದಲ್ಲಿ ಸುದ್ದಿಯಲ್ಲಿ ಇದ್ದಾರೆ. ಅರೆ.. ಅವರು ಮತ್ತೊಂದು ಸಿನಿಮಾ ಮಾಡುತ್ತ ಇದ್ದಾರೆ ಅಂದುಕೊಂಡ್ರಾ?

ಹೌದು, ನಟಿ ಶ್ರೀಲೀಲಾ ತೆರೆಯ ಮೇಲೆ ಮಾತ್ರ ಅಲ್ಲ ನಿಜ ಜೀವನದಲ್ಲೂ ಕೂಡ ಹೀರೋಯಿನ್ ಆಗಿದ್ದಾರೆ. ನಟಿ ಶ್ರೀಲೀಲಾ ಅವರು ತಮ್ಮ ಜೀವನದಲ್ಲಿ ಉತ್ತಮ ನಿರ್ಧಾರ ಒಂದನ್ನು ತೆಗೆದುಕೊಂಡಿದ್ದಾರೆ. ಈ ಮೂಲಕ ಅವರು ಮಕ್ಕಳ ಬಾಳಿಗೆ ಬೆಳಕಾಗಿದ್ದಾರೆ.ನಟಿ ಶ್ರೀಲೀಲಾ ಇಬ್ಬರು ಮಕ್ಕಳನ್ನು ದತ್ತು ಪಡೆದಿದ್ದಾರೆ. ಆದರೆ ಅವರು ಅನಾಥ ಮಕ್ಕಳನ್ನು ದತ್ತು ಪಡೆದು ಮಾದರಿಯಾಗಿದ್ದಾರೆ. ಆ ಮಕ್ಕಳ ಸಂಪೂರ್ಣ ಜವಾಬ್ದಾರಿ ಈಗ ನಟಿ ಶ್ರೀಲೀಲಾ ಅವರದ್ದೇ ಆಗಿರುತ್ತದೆ.

ಇನ್ನು ಆಶ್ರಮದಿಂದ ಇಬ್ಬರು ಮಕ್ಕಳನ್ನು ನಟಿ ದತ್ತು ಸ್ವೀಕಾರ ಮಾಡಿದ್ದಾರೆ. ಅದರಲ್ಲಿ ಗುರು ಎಂಬ ಮಗು ಕೇವಲ 8 ತಿಂಗಳ ಮಗು. ಈ ಪುಟ್ಟ ಕಂದನ ಜೊತೆಗೆ, ಶೋಭಿತಾ ಎನ್ನುವ ಹೆಣ್ಣು ಮಗುವನ್ನು ಕೂಡ ಅವರು ದತ್ತು ಪಡೆದುಕೊಂಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button