Breaking NewsLatestಮನರಂಜನೆಸಿನಿಮಾಸೆಲೆಬ್ರಿಟಿ
K V Raju: ಸ್ಯಾಂಡಲ್ವುಡ್ ಹಿರಿಯ ನಿರ್ದೇಶಕ ಕೆ ವಿ ರಾಜು ನಿಧನ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಿರ್ದೇಶಕ ಕೆ ವಿ ರಾಜು ನಿಧನ ಹೊಂದಿದ್ದಾರೆ. ಅನಾರೋಗ್ಯದ ಕಾರಣ ರಾಜಾಜಿನಗರದ ತಮ್ಮ ಮನೆಯಲ್ಲಿಯೇ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ.
ರಾಜಾಜಿನಗರದ ನಿವಾಸದಲ್ಲಿ ಕೆವಿ ರಾಜು ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಹುಲಿಯಾ, ಬೆಳ್ಳಿ ಮೋಡ, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿ ಹಲವು ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ಅವರು ನಿರ್ದೇಶಿಸಿದ್ದರು.
