
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವಥ್ ನಾರಾಯಣ್ ಇಂದು ಕೊನೆ ಉಸಿರೆಳೆದಿದ್ದಾರೆ. ಅವರು ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ನಟ, ನಟಿಯರೊಂದಿಗೆ ವಿಶಿಷ್ಠ ನಟನೆಯ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿದ್ದರು.
ಅವರು ಕೆಲ ದಿನಗಳಿಂದ ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಹಿರಿಯ ನಟ ಅಶ್ವಥ್ ನಾರಾಯಣ್ ನಿಧನ ಹೊಂದಿದ್ದಾರೆ.
ಕಳೆದ ಕೆಲ ದಿನಗಳ ಹಿಂದಷ್ಟೇ, ನನ್ನ ಮಕ್ಕಳು ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಆರೋಪ ಮಾಡಿದ್ದರು. ಕನ್ನಡದ ಸುಮಾರು 300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅಶ್ವತ್ಥ್ ನಾರಾಯಣ್ ಅವರು ಡಾ.ರಾಜ್‌ಕುಮಾರ್ ಸೇರಿದಂತೆ ಅನೇಕ ಸ್ಟಾರ್ ನಟರೊಂದಿಗೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ



