ಹುಬ್ಬಳ್ಳಿ: ಸುಟ್ಟ ಸ್ಥಿತಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಮೃತ ದೇಹ ಪತ್ತೆ

ಹುಬ್ಬಳ್ಳಿ: ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವನ ದೇಹ ಸುಟ್ಟ ಸ್ಥಿತಿಯಲ್ಲಿಯಲ್ಲಿ ಗಾರ್ಡ್ ಕೆಲಸ ಮಾಡಿಕೊಂಡಿದ್ದ ಬಿಲ್ಡಿಂಗ್‌ನ ಶೌಚಾಲಯದಲ್ಲಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಐಟಿ ಪಾರ್ಕ್ ನಡೆದಿದ್ದು, ಮೃತದೇಹ ನೋಡಿದ ಸ್ಥಳೀಯರು ಒಂದು ಕ್ಷಣ ಬೆಚ್ಚಿ ಬಿದಿದ್ದಾರೆ.
ನಗರದ ಐಟಿ ಪಾರ್ಕ್ ನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ನಿಯಮಿತದ ಶೌಚಾಲಯದಲ್ಲಿ ಗಾರ್ಡ್ ಶವ ಪತ್ತೆಯಾಗಿದೆ. ಮೃತ ದುರ್ದೈವಿ ಚನ್ನಮಲ್ಲಯ್ಯ ಶೇಖಯ್ಯ ಹಿರೇಮಠ (44) ಎಂದು ಗುರುತಿಸಲಾಗಿದೆ.
ಮೃತ ಚನ್ನಮಲ್ಲಯ್ಯ ಮೂಲತಃ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ನಿವಾಸಿಯಾಗಿದ್ದು, ಸದ್ಯ ಹುಬ್ಬಳ್ಳಿಯ ನೇಕಾರ ನಗರದಲ್ಲಿ ಪತ್ನಿ ಹಾಗೂ ಇಬ್ಬರ ಮಕ್ಕಳೊಂದಿಗೆ ವಾಸವಾಗಿದ್ದರು ಎಂದು ತಿಳಿದು ಬಂದಿದ್ದು, ಕಳೆದ ದಿನ ರಾತ್ರಿ ನಿತ್ಯದಂತೆ ಕೆಲಸಕ್ಕೆ ಬಂದಿದ್ದನಂತೆ. ಆದರೆ ಮುಂಜಾನೆ ವೇಳೆ ತಾನು ಕೆಲಸ ಮಾಡುತ್ತಿದ್ದ ಕಚೇರಿಯ ಶೌಚಾಲಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಉಪನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿ, ಪರಿಶೀಲನೆ ಕೈಗೊಡಿದ್ದಾರೆ. ಈ ಘಟನೆಗೆ ಕಾರಣವೆನ್ನು ಎಂಬುದು ಪೊಲೀಸರ ತನಿಖೆಯ ನಂತರವಷ್ಟೇ ತಿಳಿದು ಬರಬೇಕಾಗಿದೆ. ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
