Latestಕಲಬುರ್ಗಿಜಿಲ್ಲಾ ಸುದ್ದಿ
ಮಿರ್ಚಿ ಬಜ್ಜಿ ಆಸೆ ತೋರಿಸಿ ಬಾಲಕಿ ಮೇಲೆ ವೃದ್ದನಿಂದ ಅತ್ಯಾಚಾರ ಆರೋಪ
ಕಲಬುರಗಿ: ಮಿರ್ಚಿ ಬಜ್ಜಿ ಕೊಡುವುದಾಗಿ ಪುಸಲಾಯಿಸಿ ಹೊಲಕ್ಕೆ ಕರೆದೊಯ್ದು 13 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ದ ಅತ್ಯಾಚಾರವೆಸಗಿದ ಆರೋಪ ಅಫಜಲಪುರ ತಾಲ್ಲೂಕಿನ ರೇವೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.
ನವೆಂಬರ್ 29 ರಂದು ಅತ್ಯಾಚಾರ ನಡೆದಿದೆ ಎನ್ನಲಾಗಿದ್ದು, ನಿನ್ನೆ ರೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ಬಾಲಕಿಯನ್ನ ಅಫಜಲಪುರ ತಾಲ್ಲೂಕು ಆಸ್ಪತ್ರೆಗೆ ಕರೆತಂದಿದ್ದಾರೆ.
ಮಿರ್ಚಿ ಭಜ್ಜಿ ಕೊಡಿಸುವದಾಗಿ ಬಾಲಕಿಯನ್ನು ಪುಸಲಾಯಿಸಿ ಕೃತ್ಯ ಎಸಗಲಾಗಿದೆ ಅಂತ ಪೊಷಕರು ಪ್ರಕರಣ ದಾಖಲಿಸಿದ್ದಾರೆ. ಸದ್ಯ ಈ ಕುರಿತು ರೇವೂರ್ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಅಡಿ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



