Latestಜಿಲ್ಲಾ ಸುದ್ದಿಶಿವಮೊಗ್ಗ
Accident : ಲಾರಿ ಮತ್ತು ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಜಿಲ್ಲೆಯ ಮಾಚೇನಹಳ್ಳಿ ಬಳಿ ಲಾರಿ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಳಗ್ಗಿನ ಜಾವ ನಡೆದಿದೆ.
ಭದ್ರಾವತಿ ನ್ಯೂಟನ್ ನ ಷಣ್ಮುಖ, ರಾಮಚಂದ್ರ ಮೃತ ದುರ್ದೈವಿ. ಮೃತರು ಕಾರಿನಲ್ಲಿ ಭದ್ರಾವತಿಯಿಂದ ತೀರ್ಥಹಳ್ಳಿಗೆ ಹೊರಟಿದ್ದರು. ಲಾರಿ ಶಿವಮೊಗ್ಗದಿಂದ ಭದ್ರಾವತಿ ಕಡೆ ಸಾಗುತ್ತಿತ್ತು. ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳದಿಂದ ಲಾರಿ ಚಾಲಕ ಪರಾರಿಯಾಗಿದ್ದಾರೆ. ಭೀಕರ ಅಪಘಾತ ಸಂಭವಿಸಿದ್ದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



