
ಇತ್ತೀಚೆಗೆ ಸಿನಿಮಾರಂಗದಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳ ಟ್ರೆಂಡ್ ಶುರುವಾಗಿದೆ. ಈಗಾಗಲೇ ಸಾಕಷ್ಟು ಪ್ಯಾನ್ ಇಂಡಿಯಾ ಸಿನಿಮಾ ರಿಲೀಸ್ ಆಗಿ ಯಶಸ್ವಿ ಕಂಡಿವೆ. ಇದೀಗ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗುತ್ತಿದೆ.
ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಪ್ಯಾನ್ ಇಂಡಿಯಾ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ಶಿವಣ್ಣ ರೆಟ್ರೋ ಸ್ಟೈಲ್ ನ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.ಈ ಸುದ್ದಿ ಕೇಳಿ ಅಭಿಮಾನಿಗಳು ಫುಲ್ ಥ್ರಿಲ್ ಆಗಿದ್ದಾರೆ.
ನೈಜ ಘಟನೆ ಆಧರಿತ ಕ್ರೈಂ ಥ್ರಿಲ್ಲರ್ ಸಿನಿಮಾವಾಗಿದೆ. ಯೂನಿವರ್ಸಲ್ ಸಬ್ಜೆಕ್ಟ್ ಆಗಿರೋದ್ರಿಂದ ಭಾರೀ ಮೊತ್ತದ ಬಜೆಟ್ನಲ್ಲಿ ಈ ಸಿನಿಮಾ ನಿರ್ಮಾಣ ಮಾಡಲು ಸಜ್ಜಾಗಿದ್ದಾರೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ 5 ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ.
50 ವರ್ಷಗಳ ಹಿಂದೆ ಶಿವಮೊಗ್ಗದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಭೂಗತಲೋಕದ ಕಥೆ ಇದಾಗಿದೆ. ಉಪೇಂದ್ರ ನಟನೆಯ ಬುದ್ಧಿವಂತ- 2 ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ ಆರ್ ಜೈ ಈ ಚಿತ್ರಕ್ಕೂ ನಿರ್ದೇಶನ ಮಾಡಲಿದ್ದಾರೆ.
ಇನ್ನು ಶಿವಣ್ಣ ಈಗಾಗಲೇ ಭೂಗತಲೋಕದ ಸಿನಿಮಾಗಳಲ್ಲಿ ನಟಿಸಿ ಬಾಕ್ಸ್ ಆಫಿಸ್ ನಲ್ಲಿ ಸಖತ್ ಧೂಳೆಬ್ಬಿಸಿದ್ದರು. ಆದ್ರೆ ಇದೀಗ ರೆಟ್ರೋ ಸ್ಟೈಲ್ ಜೊತೆ ಅಂಡರ್ ವರ್ಲ್ಡ್ ಕಥೆ ಇರುವ ಸಿನಿಮಾದಲ್ಲಿ ಶಿವಣ್ಣ ಕಾಣಿಸಿಕೊಳ್ಳಲಿದ್ದು, ಮತ್ತೆ ಬಾಕ್ಸ್ ಆಫೀಸ್ ನಲ್ಲಿ ಅಬ್ಬರಿಸಲಿದ್ದಾರೆ ಎಂಬ ನಿರೀಕ್ಷೆ ಅಭಿಮಾನಿಗಳಿಗೆ ಮೂಡಿದೆ.



