Breaking NewsLatestಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಹರ್ಷ ಹತ್ಯೆ ಖಂಡನೆ :ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

ಧಾರವಾಡ : ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ‌ಯನ್ನು ಖಂಡಿಸಿ ಹಾಗೂ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹಿಸಿ, ಧಾರವಾಡದಲ್ಲಿ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಾಮ ಸೇನಾ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಹರ್ಷಾ ಅಮ ರಹೇ ಎಂದು ಘೋಷಣೆ ಕೂಗಿ, ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇತ್ತಿಚಿನ ದಿನಗಳಲ್ಲಿ ಹಿಂದೂಪರ ಸಂಘಟನೆಯ ಮುಖಂಡರ ಹಾಗೂ ಕಾರ್ಯಕರ್ತರ ಹತ್ಯೆಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈಗ ಇದಕ್ಕೆ ನಮ್ಮ ಹಿಂದೂ ಪರ ಹೋರಾಟಗಾರ ಶಿವಮೊಗ್ಗ ಮೂಲದ ಹರ್ಷಾ ಯುವಕ ಬಲಿಯಾಗಿದ್ದಾನೆ. ಈ ಕೊಲೆ ಮಾಡಿದ ಆರೋಪಿಗಳನ್ನು ಈಗಾಗಲೇ ನಮ್ಮ ಪೊಲೀಸ್ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಆದರೆ ಇವರಿಗೆ ಗಲ್ಲು ಶಿಕ್ಷೆಯಾಗುವಂತೆ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರ ಗಮನಹರಿಸಬೇಕು ಎಂದು ಅಗ್ರಹಿಸಿದರು.

ಒಂದುವೇಳೆ‌ ಇದರಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗದಿದ್ದಲ್ಲಿ, ನಮ್ಮ ಹೋರಾಟವನ್ನು ರಾಜ್ಯ ವ್ಯಾಪಿ ವಿಸ್ತರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button