Latestವಿದೇಶಸುದ್ದಿ

ಜಲಿಯನ್ ವಾಲಾಭಾಗ್‍ ಹತ್ಯಾಕಾಂಡ ಪ್ರತಿಕಾರವಾಗಿ ಬ್ರಿಟನ್ ರಾಣಿ ಹತ್ಯೆಗೆ ಯತ್ನ: ಸಿಖ್​​​​​​ ಯುವಕನ ಬಂಧನ

ಲಂಡನ್​​​: ಬ್ರಿಟನ್ ರಾಣಿ ಎಲಿಜಬೆತ್ ಅವರನ್ನು ಹತ್ಯೆ ಮಾಡಲು ಯತ್ನಿಸಿದ 19 ವರ್ಷದ ಯುವಕನನ್ನು ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ. ಭಾರತೀಯ ಮೂಲದ ಸಿಖ್ ಯುವಕ ಜಸ್ವಂತ್ ಸಿಂಗ್ ಚೊಯಿಲ್‌ ಎಂದು ತಿಳಿದು ಬಂದಿದೆ.

ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ರಾಣಿಯನ್ನು ಹತ್ಯೆ ಮಾಡಲು ಮುಂದಾಗಿದ್ದಾಗಿ ಆರೋಪಿ ಸ್ನ್ಯಾಪ್‌ ಚಾಟ್‌ನಲ್ಲಿ ವಿಡಿಯೋ ಮೂಲಕ ಹೇಳಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ವಿಂಡ್ಸರ್‌ ಕ್ಯಾಸಲ್‌ನಲ್ಲಿ ಕ್ರಿಸ್ಮಸ್ ಆಚರಿಸಲು ರಾಣಿ ಎಲಿಜಬೆತ್ ವಿಂಡ್ಸರ್ ಕ್ಯಾಸಲ್‌ಗೆ ಆಗಮಿಸಿದ್ದರು. ಆಗ ಸ್ಥಳಕ್ಕೆ ಹೋಗಿದ್ದ ಆರೋಪಿ ತನ್ನ ಕೈಯಲ್ಲಿ ಬಿಲ್ಲಿನಂತಹ ಆಯುಧವನ್ನು ಹಿಡಿದುಕೊಂಡಿದ್ದ. ರಾಣಿಯ ನಿವಾಸಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಪೊಲೀಸರು ಆತನನ್ನು ಬಂಧಿಸಿದ್ದು, ಆತನ ಬಳಿ ಇದ್ದ ಆಯುಧವನ್ನು ವಶಪಡಿಸಿಕೊಂಡಿದ್ದಾರೆ.

ಸೌತಾಂಪ್ಟನ್ ಪ್ರದೇಶದಲ್ಲಿ ತಮ್ಮ ಕುಟುಂಬದೊಂದಿಗೆ ಬಂಧಿತ ಯುವಕ ವಾಸಿಸುತ್ತಿದ್ದ ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಪೊಲೀಸ್‌ ತನಿಖೆ ನಡೆಯುತ್ತಿದೆ.

Spread the love

Related Articles

Leave a Reply

Your email address will not be published. Required fields are marked *

Back to top button