Latestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ವರುಣನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಹೈರಾಣ!

ಬೆಂಗಳೂರು: ತಾಪಮಾನ ಏರಿಕೆ ಯಿಂದಾಗಿ ನಗರದಲ್ಲಿ ಬುಧವಾರ ಸಂಜೆ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಿತು. ಹಲವೆಡೆ ಮರಗಳು ಧರೆಗುರುಳಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು.

ಕೆ.ಆರ್‌.ಮಾರುಕಟ್ಟೆ, ವಿಜಯನಗರ, ನಾಯಂಡಹಳ್ಳಿ, ಕೆಂಗೇರಿ, ಬ್ಯಾಟರಾಯನಪುರ, ಗಿರಿನಗರ, ಹೊಸಕೆರೆಹಳ್ಳಿ, ಶ್ರೀನಿವಾಸನಗರ, ಕತ್ರಿಗುಪ್ಪೆ, ಹನುಮಂತ ನಗರ, ರಾಜ ರಾಜೇಶ್ವರಿ ನಗರ, ದಾಸರಹಳ್ಳಿ, ಮಲ್ಲೇಶ್ವರ, ಮಹಾಲಕ್ಷ್ಮಿ ಬಡಾವಣೆ, ಎಂ.ಜಿ.ರಸ್ತೆ, ಇಂದಿರಾನಗರ, ಬ್ರಿಗೇಡ್‌ ರಸ್ತೆ, ಹಲಸೂರು, ಜೀವನ್‌ಭೀಮಾ ನಗರ, ಕಸ್ತೂರಿನಗರ, ಬಾಣಸವಾಡಿ, ಕೋರಮಂಗಲ, ಎಚ್‌ಎಸ್‌ಆರ್‌ ಬಡಾವಣೆ, ಬೊಮ್ಮನಹಳ್ಳಿ, ಕೆ.ಆರ್‌.ಪುರ, ನಾಗರಬಾವಿ, ರಾಮಮೂರ್ತಿ ನಗರ ಸೇರಿದಂತೆ ಹಲವೆಡೆಯೂ ಧಾರಾಕಾರ ಮಳೆ ಸುರಿಯಿತು.

ಕೆಲವೆಡೆ ಸಂಚಾರ ದಟ್ಟಣೆಯೂ ಉಂಟಾಯಿತು. ಗುಂಡಿ ಬಿದ್ದಿದ್ದ ರಸ್ತೆಗಳು ಮಳೆನೀರಿನಿಂದ ತುಂಬಿದ್ದರಿಂದ ದ್ವಿಚಕ್ರ ವಾಹನ ಸವಾರರು ಸಮಸ್ಯೆ ಎದುರಿಸಿದರು. ನಗರದ ಹಲವೆಡೆ ನೆಲದಡಿಯಲ್ಲಿ ವಿದ್ಯುತ್‌ ಕೇಬಲ್‌ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇದಕ್ಕಾಗಿ ಅಗೆಯಲಾಗಿದ್ದ ಗುಂಡಿಗಳಲ್ಲೂ ಮಳೆ ನೀರು ಸಂಗ್ರಹವಾಗಿತ್ತು. ಅಲ್ಲಲ್ಲಿ ರಾಶಿ ಹಾಕಿದ್ದ ಮಣ್ಣು ಮಳೆಗೆ ಕೊಚ್ಚಿಕೊಂಡು ರಸ್ತೆ ಮೇಲೆ ಹರಡಿಕೊಂಡಿತ್ತು.

ಇದರಿಂದ ವ್ಯಾಪಾರಿಗಳು ಪರದಾಡುವಂತಾಯಿತು. ಮಳೆಯಿಂದಾಗಿ ಕೆ.ಆರ್‌.ಮಾರುಕಟ್ಟೆ ಸೇರಿ ಪ್ರಮುಖ ಮಾರುಕಟ್ಟೆಗಳಲ್ಲಿನ ವರ್ತಕರು ಹಾಗೂ ನಗರದಾದ್ಯಂತ ಬೀದಿಬದಿ ವ್ಯಾಪಾರಿಗಳು ಸಂಕಷ್ಟ ಎದುರಿಸಿಬೇಕಾಯಿತು.

Spread the love

Related Articles

Leave a Reply

Your email address will not be published. Required fields are marked *

Back to top button