Breaking NewsLatestರಾಜಕೀಯರಾಜ್ಯ
ಮಂಡ್ಯ ಅಕ್ರಮ ಗಣಿಗಾರಿಕೆ ತನಿಖೆ; ಅಮಿತ್ ಶಾಗೆ ಸುಮಲತಾ ಮನವಿ

ನವದೆಹಲಿ: ಮಂಡ್ಯ ಜಿಲ್ಲೆಯ ಕೆಆರ್ ಎಸ್ ಜಲಾಶಯದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅರವಿಗೆ ಮಂಡ್ಯ ಸಂಸದೆ ಸುಮಲತಾ ಮನವಿ ಮಾಡಿದ್ದಾರೆ.
ಶುಕ್ರವಾರ ನವದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಸಂಸದೆ ಸುಮಲತಾ, ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ ಕೈಗೋ್ಳುವಂತೆ ಕೋರಿದರು.
ಸಂಸದೆ ಸುಮಲತಾ ಮಂಡ್ಯದಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿಯೆತ್ತಿದ್ದು ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
