Breaking NewsLatestರಾಷ್ಟ್ರೀಯಸುದ್ದಿ

Supreme Court: ಮೇಕೆದಾಟು ಅಣೆಕಟ್ಟು ನಿರ್ಮಾಣ ವಿವಾದ : ಜ.27ಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ : ಮೇಕೆದಾಟು ಅಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಜನವರಿ 27ಕ್ಕೆ ಈ ಬಗ್ಗೆ ವಿಸ್ತೃತ ವಿಚಾರಣೆ ನಡೆಸುವುದಾಗಿ ನ್ಯಾ.ಎ.ಎಂ ಖಾನ್ವಿಲ್ಕರ್ ನೇತೃತ್ವದ ದ್ವಿ ಸದಸ್ಯ ಪೀಠ ಹೇಳಿದೆ.

ಮೇಕೆದಾಟು ಆಣೆಕಟ್ಟು ನಿರ್ಮಾಣ ವಿಚಾರವಾಗಿ ದೆಹಲಿಯ ರಾಷ್ಟ್ರೀಯ ಹಸಿರು ನ್ಯಾಯಧೀಕರಣ ನೀಡಿದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ಮೂಲ ಅರ್ಜಿಯೊಂದಿಗೆ ಇದನ್ನೂ ವಿಚಾರಣೆ ನಡೆಸುವುದಾಗಿ ಹೇಳಿದೆ.

ಮೇಕೆದಾಟು ಅಣೆಕಟ್ಟು ನಿರ್ಮಾಣ ಪ್ರದೇಶದಲ್ಲಿ ಈಗಾಗಲೇ ಕಾಮಗಾರಿ ಆರಂಭವಾಗಿದೆ. ಇದು ಪರಿಸರದ ಮೇಲೆ ಪರಿಣಾಮ ಬೀರಲಿದೆ ಎಂದು ತಮಿಳುನಾಡು ಮಾಧ್ಯಮಗಳು ವರದಿ ಮಾಡಿದ್ದವು. ವರದಿ ಆಧರಿಸಿ ಚೆನ್ನೈನಲ್ಲಿರುವ ದಕ್ಷಿಣ ಹಸಿರು ನ್ಯಾಯಧೀಕರಣ ಸ್ವಯಂ ದೂರು ದಾಖಲಿಸಿಕೊಂಡಿತ್ತು.

ತಮಿಳುನಾಡು ಸರ್ಕಾರ ಸಲ್ಲಿಸಿದ ಮಾಹಿತಿಯೊಂದಿಗೆ ವಿಚಾರಣೆ ನಡೆಸಿದ ಕೋರ್ಟ್ ಸ್ಥಳ ಪರಿಶೀಲನೆಗಾಗಿ ಸಮಿತಿ ರಚನೆ ಮಾಡಿತ್ತು. ಆದರೆ ತನ್ನ ಅಭಿಪ್ರಾಯ ಕೇಳದೆ ರಚಿಸಿದ್ದ ಸಮಿತಿಗೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿ ದೆಹಲಿಯ ಹಸಿರು ನ್ಯಾಯಧೀಕರಣಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.

Spread the love

Related Articles

Leave a Reply

Your email address will not be published. Required fields are marked *

Back to top button