Latestಚಿಕ್ಕಮಗಳೂರುಜಿಲ್ಲಾ ಸುದ್ದಿ
ಶಿಕ್ಷಕನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು : ಆರೋಪಿ ಪರಾರಿ

ಚಿಕ್ಕಮಗಳೂರು : ಎನ್ ಆರ್ ಪುರ ಶಾಲೆಯೊಂದರ ಶಿಕ್ಷಕನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಪೋಷಕರು ಶಿಕ್ಷಣಾಧಿಕಾರಿಗಳಿಗೆ ನೀಡಿದ ದೂರಿನ ಮೇರೆಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಕ್ಷಕ ಪ್ರಭುನಾಯ್ಕ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯಾಗಿದ್ದು, ಪ್ರಕರಣ ದಾಖಲಾದ ಬೆನ್ನಲ್ಲೇ ಇನ್ನೂ 8 ಪೋಷಕರು ದೂರು ದಾಖಲಿಸಿದ್ದಾರೆ. ಇನ್ನಷ್ಟು ಮಕ್ಕಳ ಪೋಷಕರು ದೂರನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಪೋಷಕರ ದೂರಿನನ್ವಯ ಪೊಲೀಸರು ಶಿಕ್ಷಕನ ವಿರುದ್ಧ ಫೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದಾರೆ.
ಎಎಸ್ಪಿ ಶೃತಿ ಹಾಗೂ ಪಿಸ್ಐ ನೀತುಗುಡೆ ತಂಡದವರು ಮೊಕ್ಕಾಂ ಹೂಡಿದ್ದು, ಇನ್ನಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ತಲೆಮರೆಸಿಕೊಂಡ ಶಿಕ್ಷಕನಿಗೆ ತೀವ್ರ ಶೋಧಕಾರ್ಯ ನಡೆಯುತ್ತಿದೆ.



