Latestಜಿಲ್ಲಾ ಸುದ್ದಿರಾಜಕೀಯಹುಬ್ಬಳ್ಳಿ - ಧಾರವಾಡ

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15 ಸ್ಥಾನಗಳನ್ನು ಗೆಲ್ಲಲಿದೆ: ಬಿ ಎಸ್ ಯಡಿಯೂರಪ್ಪ

ಹುಬ್ಬಳ್ಳಿ: ನಾಳೆ ವಿಧಾನ ಪರಿಷತ್ ಫಲಿತಾಂಶ ಪ್ರಕಟವಾಗಲಿದ್ದು, ಅದರಲ್ಲಿ ನಾವು ಕನಿಷ್ಠ 15 ಸೀಟ್ ಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದೇವೆ. ಜೊತೆಗೆ‌ 15 ಸ್ಥಾನಗಳು ಬರುವುದರಿಂದ ವಿಧಾನ ಪರಿಷತ್ ನಲ್ಲಿ ನಮಗೆ ಬಹುಮತ ಸಾಬೀತು ಆಗುತ್ತೆ. ಜನ ನಮಗೆ ಆಶೀರ್ವಾದ ಮಾಡ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನ ಚರ್ಚೆಗಳಿಗೆ ಮತ್ತು ಹಲವು ತೀರ್ಮಾನಗಳು ಆಗುತ್ತವೆ. ಮತಾಂತರ ಕಾಯ್ದೆ ನಿಷೇಧ ಜಾರಿ ವಿಚಾರಕ್ಕೆ, ಕಾಂಗ್ರೆಸ್ ವಿರೋಧ ಇದ್ದೆ ಇರುತ್ತೆ. ನಮ್ಮ ಅಪೇಕ್ಷೆ ಸಹ ನಿಷೇಧ ಮಾಡೋದು ಇದೆ. ಹಲವು ರಾಜ್ಯಗಳಲ್ಲಿ ಮತಾಂತರ ಕಾಯ್ದೆ ಜಾರಿ ಆಗಿದೆ. ಮತಾಂತರ ನಿಷೇಧ ಕಾಯ್ದೆ ಇದೆ ಅಧಿವೇಶನದಲ್ಲಿ ಪಾಸ್ ಆಗಲಿದೆ. ಅಧಿವೇಶನ ಮುಗಿಯುವ ಕೇವಲ ಎರಡು ಮೂರು ದಿನಗಳ ಒಳಗೆ ಕಾಯ್ದೆ ಜಾರಿ ಆಗಲಿದೆ, ಇದಕ್ಕೆ ಕೇವಲ ನನ್ನ ಅಭಿಪ್ರಾಯ ಅಷ್ಟೇ ಅಲ್ಲ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಆಡಳಿತ ಪಕ್ಷದವರು ಸೇರಿದಂತೆ ಸಂಸತ್ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದರು.

ಕಾಂಗ್ರೆಸ್‌ನ ರಾಯರೆಡ್ಡಿ ಹೇಳಿಕೆಯಲ್ಲಿ ಸತ್ಯಾಂಶವಿಲ್ಲ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬಿಜೆಪಿ ನಾಯಕರಿಂದ ಸಹಕಾರ ಸಿಗುತ್ತಿಲ್ಲ ಎನ್ನುವ ರಾಯರೆಡ್ಡಿ ಹೇಳಿಕೆ ವಿಚಾರದಲ್ಲಿ, ಅದರಲ್ಲಿ ಸತ್ಯಾಂಶ ಇಲ್ಲ, ಎಲ್ಲ ರೀತಿಯ ಸಹಕಾರ ಸಿಗುತ್ತಿದೆ. ಬಿಜೆಪಿಯಲ್ಲಿ ಅವರ ಅವಧಿಯನ್ನ ಬೊಮ್ಮಾಯಿ ಪೂರ್ಣಗೊಳಿಸುತ್ತಾರೆ ಎಂದು ತಿಳಿಸಿದರು. ‌

Spread the love

Related Articles

Leave a Reply

Your email address will not be published. Required fields are marked *

Back to top button