Breaking NewsLatestಕಲಬುರ್ಗಿಕ್ರೈಂಜಿಲ್ಲಾ ಸುದ್ದಿ

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್!

ಕಲಬುರಗಿ: ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನ ಬಂಧಿಸಿ ಸುಮಾರು 2 ಲಕ್ಷ 22 ಸಾವಿರ ರೂಪಾಯಿ ಮೌಲ್ಯದ ಗಾಂಜಾವನ್ನ ವಶಪಡಿಸಿಕೊಂಡಂತಹ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬಲರಾಮ್ ಚೌಕ್ ಬಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಎಸ್ಪಿ ಇಶಾ ಪಂತ್ ಮಾರ್ಗದರ್ಶನದಲ್ಲಿ ಶಹಬಾದ್ ಡಿವೈಎಸ್ಪಿ ನೇತೃತ್ವದಲ್ಲಿ ಚಿತ್ತಾಪುರ ಠಾಣೆ ಸಿಪಿಐ ಹಾಗೂ ವಾಡಿ ಠಾಣೆ ಪಿಎಸ್ಐ ಹಾಗೂ ಸಿಬ್ಬಂದಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಬಲರಾಮ್ ಚೌಕ್ ಬಳಿ ವಾಹನದಲ್ಲಿ ಸಾಗಾಟ ಮಾಡ್ತಿದ್ದ 2 ಲಕ್ಷ 22 ಸಾವಿರ ರೂಪಾಯಿ ಮೌಲ್ಯದ ಗಾಂಜಾವನ್ನ ಸೀಜ್ ಮಾಡಿ ಆರೋಪಿಯನ್ನ ಬಂಧಿಸಿದ್ದಾರೆ.. ಇನ್ನೂ ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button