Latestಜಿಲ್ಲಾ ಸುದ್ದಿಮೈಸೂರು
Tiger : ಕಬಿನಿ ಹಿನ್ನೀರಿನಲ್ಲಿ ಹುಲಿಯ ಮೃತದೇಹ ಪತ್ತೆ

ಮೈಸೂರು : ಮೈಸೂರು ಜಿಲ್ಲೆಯ ಕಬಿನಿ ಹಿನ್ನೀರಿನ ನಾಯಳ್ಳದಲ್ಲಿ ಕೊಳೆತೆ ಸ್ಥಿತಿಯಲ್ಲಿ ಗಂಡು ಹುಲಿಯ ಮೃತ ದೇಹ ಪತ್ತೆಯಾಗಿದೆ.
ಗುಂಡ್ರೆ ಅರಣ್ಯ ಪ್ರದೇಶದಲ್ಲಿ ಸುಮಾರು 8 ವರ್ಷ ಪ್ರಾಯದ ಗಂಡು ಹುಲಿಯ ಕಳೆಬರ ಪತ್ತೆಯಾಗಿದೆ. ಗಸ್ತಿನಲ್ಲಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಗೆ ಪತ್ತೆಯಾಗಿದ್ದು ಗಂಡು ಹುಲಿಯ ಮೃತ ದೇಹವನ್ನು ಪರಿಶೀಲಿಸಿದ್ದಾರೆ. ಹುಲಿಗಳ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡು ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಸಿಎಫ್ ಕರಿಕಾಳನ್ ಸೇರಿದಂತೆ ಇತರ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದೆ. ಹುಲಿ ಮರಣೋತ್ತರ ಪರೀಕ್ಷೆ ನಂತರ ಹುಲಿಯ ಮೃತದೇಹಕ್ಕೆ ಅಗ್ನಿ ಸ್ಪರ್ಶ ಮಾಡಲಾಗುತ್ತದೆ.



