Latestಮನರಂಜನೆಸಿನಿಮಾ

ಆರ್ ಆರ್ ಆರ್ ಚಿತ್ರ ರಿಲೀಸ್ ಗೆ ಭರ್ಜರಿ ಪ್ಲಾನ್ ರೂಪಿಸಿದ ಚಿತ್ರತಂಡ

ರಾಜಮೌಳಿ ಸಿನಿಮಾ ಅಂದರೆ ಸಾಕು ಅಭಿಮಾನಿಗಳು ಸಿನಿಮಾ ನೋಡಲು ತುದಿಗಾಲಲ್ಲಿ ನಿಲ್ಲುತ್ತಾರೆ. ಈಗ ಅವರ ನಿರ್ದೇಶನದ ಆರ್ ಆರ್ ಆರ್ ಸಿನಿಮಾ ಬಿಡುಗಡೆಯ ಹಂತದಲ್ಲಿದೆ. ಮುಂದಿನ ತಿಂಗಳು ಅಂದರೆ ಮಾರ್ಚ್ 25 ರಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಈಗಾಗಲೇ ಪೋಸ್ಟರ್, ಟೀಸರ್ ಗಳಿಂದಲೇ ಈ ಸಿನಿಮಾ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿದೆ.

ಎಲ್ಲ ಅಂದುಕೊಂಡಂತೆ ಆಗಿದ್ದರೆ ಇಷ್ಟು ಹೊತ್ತಿಗಾಗಲೇ ಈ ಸಿನಿಮಾ ಜನವರಿಯಲ್ಲೇ ರಿಲೀಸ್ ಆಗಬೇಕಿತ್ತು. ಕಳೆದ ಡಿಸೆಂಬರ್ ನಲ್ಲಿ ಚಿತ್ರತಂಡ ಭರ್ಜರಿ ಪ್ರಚಾರ ಕೈಗೊಂಡಿತ್ತು. ಬೆಂಗಳೂರು ಸೇರಿದಂತೆ ನಾನಾ ಕಡೆ ಪ್ರಮೋಷನ್ ನಲ್ಲಿ ತೊಡಗಿಕೊಂಡಿತ್ತು. ಇದರಿಂದ ಅಭಿಮಾನಿಗಳು ಬಹಳ ಖುಷಿಯಿಂದ ಇದ್ದರು. ಆದರೆ ಕೊರೊನಾ ಹೆಚ್ಚಳದಿಂದ ಸಿನಿಮಾ ಮುಂದೂಡಿದ್ದರಿಂದ ಅಭಿಮಾನಿಗಳಿಗೆ ಭಾರಿ ನಿರಾಸೆ ಮೂಡಿತ್ತು.

ಇದೀಗ ಈ ಸಿನಿಮಾ ಮುಂದಿನ ತಿಂಗಳು ಮಾರ್ಚ್ 25 ರಂದು ವಿಶ್ವದ್ಯಂತ ರಿಲೀಸ್ ಆಗಲಿದೆ. ಹೀಗಾಗಿ ಚಿತ್ರತಂಡ ಮತ್ತೆ ಭರ್ಜರಿ ಪ್ಲಾನ್ ಮಾಡಿಕೊಂಡಿದೆ. ಏನಾಪ್ಪ ಅಂದರೆ ಮಾರ್ಚ್ 1 ರಿಂದ ಮತ್ತೆ ಪ್ರಮೋಷನ್ ಆರಂಭಿಸಿಲಿದ್ದಾರೆ. ಈಗಾಗಲೇ ಚಿತ್ರತಂಡ ಸಕಲ ಸಿದ್ದತೆ ಮಾಡಿಕೊಂಡಿದೆ. ಆದರೆ ಅಭಿಮಾನಿಗಳು ಈ ಸಿನಿಮಾದ ಟಿಕೆಟ್ ಬುಕ್ಕಿಂಗ್ ಯಾವಾಗ ಬಿಡುತ್ತಾರೆ ಎಂದು ಕಾತುರದಿಂದ ಕಾಯುತ್ತಿದ್ದಾರೆ.
ಒಟ್ಟಾರೆಯಾಗಿ ಈ ಸಿನಿಮಾವನ್ನು ಸಿನಿಪ್ರಿಯರು ಯಾವ ರೀತಿ ಸ್ವೀಕರಿಸುತ್ತಾರೆ ಎಂಬುದು ಕಾದುನೋಡಬೇಕಿದೆ.

Spread the love

Related Articles

Leave a Reply

Your email address will not be published. Required fields are marked *

Back to top button