Breaking NewsLatestಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ
ಸಾರಿಗೆ ಸಂಸ್ಥೆ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ

ಧಾರವಾಡ: ಗ್ರಾಮೀಣ ಸರ್ಕಾರಿ ಸಾರಿಗೆ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಧಾರವಾಡದ ಉಪ್ಪಿನಬೆಟಗೇರಿ ಹಾಗೂ ಪುಡಕಲಕಟ್ಟಿ ನಡುವಿನ ಮಾರ್ಗದ ಕರಡಿಗುಡ್ಡ ಗ್ರಾಮದ ಬಳಿ ಸಂಭವಿಸಿದೆ. ಅದೃಷ್ಟವಶಾತ್ ದೊಡ್ಡ ದುರಂತ ತಪ್ಪಿದಂತಾಗಿದೆ.
ಉಪ್ಪಿನ ಬೆಟಗೇರಿ ಕಡೆಯಿಂದ ಪುಡಕಲಕಟ್ಟಿ ಮಾರ್ಗವಾಗಿ ಧಾರವಾಡ ಕಡೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್ ಕರಡಿಗುಡ್ಡ ಸಮೀಪ ಬರುತ್ತಿದಂತೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಧಾರವಾಡ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಸ್ ನಲ್ಲಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 35-40 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ರಸ್ತೆ ಪಕ್ಕದ ಕಂದಕಕ್ಕೆ ಬಸ್ ಪಲ್ಟಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
