Breaking NewsLatestಜಿಲ್ಲಾ ಸುದ್ದಿಶಿವಮೊಗ್ಗ
ಶಿವಮೊಗ್ಗದಲ್ಲಿ ಮತ್ತೆ ಮಂಗನ ಕಾಯಿಲೆ ಭೀತಿ; ಇಬ್ಬರು ಮಹಿಳೆಯರಿಗೆ ದೃಢ

ಶಿವಮೊಗ್ಗ:ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಶುರುವಾಗಿದೆ. ತೀರ್ಥಹಳ್ಳಿ ತಾಲೂಕಿನ ಇಬ್ಬರು ಮಹಿಳೆಯರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ.
ದಾವಣಗೆರೆ ಮೂಲದ 40 ವರ್ಷದ ಮಹಿಳೆ ಕೆಲಸಕ್ಕೆಂದು ತೀರ್ಥಹಳ್ಳಿಗೆ ಬಂದಿದ್ದರು. ಆದರೆ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಅವರಿಗೆ ಮಂಗನ ಕಾಯಿಲೆ ಇರುವುದು ದೃಢವಾಗಿದೆ.ಇಬ್ಬರು ಮಹಿಳೆಯರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಮತ್ತೊಬ್ಬ ಮಹಿಳೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಒಟ್ಟಾರೆಯಾಗಿ ಕಳೆದ ವರ್ಷ ಮಲೆನಾಡಿಗರ ನಿದ್ದೆ ಗೆಡಿಸಿದ್ದ ಮಂಗನ ಕಾಯಿಲೆ ಭೀತಿ ಇದೀಗ ಮತ್ತೆ ಶುರುವಾಗಿದೆ. ಜಿಲ್ಲೆಯ ಇಬ್ಬರು ಮಹಿಳೆಯರಲ್ಲಿ ಮಂಗನ ಕಾಯಿಲೆ ಪತ್ತೆಯಾದ ಹಿನ್ನೆಲೆಯಲ್ಲಿ ಆ ಭಾಗದ ಜನರು ಆತಂಕಗೊಂಡಿದ್ದಾರೆ.
