ಧಾರವಾಡ: ಇಬ್ಬರಲ್ಲಿ ಒಮಿಕ್ರಾನ್ ವೈರಸ್ ಪತ್ತೆ: ಜಿಲ್ಲಾಧಿಕಾರಿ ನಿತೇಶ ಪಾಟೀಲ್

ಧಾರವಾಡ: ಜಿಲ್ಲೆಯಲ್ಲಿ ಎರಡು ಒಮಿಕ್ರಾನ್ ವೈರಸ್ ಪ್ರಕರಣ ವರದಿಯಾಗಿದೆ. ಇಬ್ಬರು ಹುಬ್ಬಳ್ಳಿಯ ನಿವಾಸಿಗಳಾಗಿದ್ದು, ಅವರಿಗೆ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವರು 53 ವರ್ಷದ ಮಹಿಳೆಯಾಗಿದ್ದಾರೆ. ಮತ್ತೋರ್ವರು 14 ವರ್ಷದ ಮಹಿಳೆಯಾಗಿದ್ದಾರೆ. ಇಬ್ಬರು ಕೂಡಾ ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ನಗರದ ಜೆಎಸ್ಎಸ್ ಮಾಹಾ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ -19 ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ಪತ್ತೆಯಾದ ಮಹಿಳೆಯರಿಗೆ ಸಣ್ಣ ಪ್ರಮಾಣದ ಸೋಂಕು ಕಾಣಿಸಿಕೊಂಡಿತ್ತು. ಹಾಗಾಗಿ ಅವರನ್ನು ಕಳೆದ ಡಿಸೆಂಬರ್ 19 ರಂದು ಒಬ್ಬರಿಗೆ ಹಾಗೂ 17 ರಂದು ಮತ್ತೊಬ್ಬರಿಗೆ ತಪಾಸಣೆ ಒಳಪಡಿಸಲಾಗಿದ್ದು, ಇಬ್ಬರಲ್ಲಿ ಈಗ ಪಾಸಿಟಿವ್ ವರಿದಿ ಬಂದಿದೆ ಎಂದರು.
ಜನತೆ ಎರಡು ತಿಂಗಳು ಎಚ್ಚರಿಕೆಯಿಂದ ಇರಬೇಕು:
ಒಮಿಕ್ರಾನ್ ವೈರಸ್ ಪತ್ತೆಯಾದ ಇಬ್ಬರು ಸೋಂಕಿತ ಸಂಪರ್ಕಿತರನ್ನು ಟೆಸ್ಟ್‌ಗೆ ಒಳಪಡಿಸಲಾಗಿದೆ. ಒಟ್ಟು 395 ಜನರನ್ನು ಟೆಸ್ಟ್‌ಗೆ ಒಳಪಡಿಸಲಾಗಿದ್ದು, ಇದರಲ್ಲಿ ಯಾರಿಗೂ ಕೂಡಾ ವೈರಸ್ ಪತ್ತೆಯಾಗಿಲ್ಲ. ಇನ್ನೂ 14 ವರ್ಷದ ವಿದ್ಯಾರ್ಥಿನಿ ಓದುತ್ತಿದ್ದ ಶಾಲೆಯ ತರಗತಿಗಳಿಗೆ ನಿರ್ಬಂಧ ಹಾಕಲಾಗಿದೆ. ಶಾಲೆಯ ವಿದ್ಯಾರ್ಥಿಗಳನ್ನು ಈಗಾಗಲೇ ಒಮ್ಮೆ ಪರೀಕ್ಷೆ ಮಾಡಲಾಗಿದೆ. ಯಾರಲ್ಲೂ ವೈರಸ್ ಬಂದಿಲ್ಲ, ಇಂದು ಮತ್ತೊಮ್ಮೆ ಟೆಸ್ಟ್ ನಡೆಸಲಾಗುತ್ತಿದೆ, ಅದರಲ್ಲಿ ಯಾರಿಗೂ ವೈರಸ್ ಬರದೆ ಇದಲ್ಲಿ ಶಾಲೆ ತರಗತಿ ಆರಂಭಕ್ಕೆ ಅನುಮತಿ ನೀಡಲಾಗುವುದು ಎಂದು ಮನವಿ ಮಾಡಿದರು.
ಜನತೆ ಸಹಕಾರ ನೀಡಬೇಕು :
ಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ವೈರಸ್ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ಎರಡು ಡೋಸ್ ಲಸಿಕೆ ನೀಡಲು ಹೆಚ್ಚು ಒತ್ತು ನೀಡಲಾಗುತ್ತಿದೆ. ಇದರ ಜೊತೆಗೆ ಇಂದಿನಿಂದ ಮಕ್ಕಳಿಗೂ ಲಸಿಕಾ ಅಭಿಯಾನ ಆರಂಭ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ವೈರಸ್ ಹರಡುವಿಕೆಯನ್ನು ಯಶಸ್ವಿಯಾಗಿ ತಡೆಯಲು ಜಿಲ್ಲೆಯ ಜನತೆ ಸಹಕಾರ ತುಂಬಾ ಮುಖ್ಯವಾಗಿರುತ್ತದೆ. ಹಾಗಾಗಿ ಜನರು ಜಿಲ್ಲಾಡಳಿತದೊಂದಿಗೆ ವೈರಸ್ ತಡೆಯಲು ಕೈ ಜೋಡಿಸಬೇಕು ಎಂದು ಹೇಳಿದರು



