Breaking NewsLatestಬಾಲಿವುಡ್ಮನರಂಜನೆಸಿನಿಮಾ

Viral Video: ಬಾಲಿವುಡ್ ನಟ ವರುಣ್ ಧವನ್ ಜೊತೆ ಕೊಡಗಿನ ಕುವರಿ ಸ್ಟೆಪ್ಸ್

ಇತ್ತೀಚೆಗೆ ನಟ-ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಕೆಲವರು ಟ್ರಿಪ್ ಗೆ ಹೋಗಿದ್ದ ಫೋಟೋಗಳನ್ನು ಶೇರ್ ಮಾಡಿದ್ರೆ, ಇನ್ನು ಕೆಲವರು ಒಂದೆರಡು ಸ್ಟೆಪ್ಸ್ ಹಾಕಿರೋ ವಿಡಿಯೋಗಳನ್ನು ಶೇರ್ ಮಾಡುತ್ತಾರೆ. ಇದೀಗ ಅಲ್ಲು ಅರ್ಜುನ್ ಜೊತೆ ಪುಷ್ಪ ಸಿನಿಮಾದಲ್ಲಿ ನಟಿಸಿ ಎಲ್ಲರ ಮನಗೆದಿದ್ದ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಒಂದೆರಡು ಹೆಜ್ಜೆ ಹಾಕಿದ್ದು, ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.

ಹೌದು ಬಾಲಿವುಡ್ ನಟ ವರುಣ್ ಧವನ್ ಜೊತೆ ರಶ್ಮಿಕಾ ಮಂದಣ್ಣ ಸ್ಟೆಪ್ಸ್ ಹಾಕಿದ್ದಾರೆ. ಅರೇಬಿಕ್ ಕುತು ಚಾಲೆಂಜ್’ ಸವಾಲನ್ನು ತೆಗೆದುಕೊಂಡು, ತಾರೆಯರಾದ ದಳಪತಿ ವಿಜಯ್ ಮತ್ತು ನಟಿ ಪೂಜಾ ಹೆಗ್ಡೆ ಅವರ ಬೀಸ್ಟ್ ನ ಹಲಾಮಿತಿ ಹಬೀಬೊ ಎಂಬ ವೈರಲ್ ಹಾಡಿಗೆ ಡ್ಯಾನ್ಸ್ ಮಾಡುತ್ತಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅಂದಹಾಗೆ ನಟ ವರುಣ್ ಧವನ್ ಪೋಸ್ಟ್ ಗೆ “ಯೋ ಹಬೀಬೊ, ಮರಳಿನ ಮೇಲೆ ನೃತ್ಯ ಮಾಡುವ ಬಗೆ” ಎಂದು ಶೀರ್ಷಿಕೆಯನ್ನು ಸಹ ಬರೆದು ಕೊಂಡಿದ್ದಾರೆ. ಈ ವಿಡಿಯೋವನ್ನು ಈಗಾಗಲೇ 32 ಲಕ್ಷಕ್ಕಿಂತಲೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button