Breaking NewsLatestಮನರಂಜನೆಸಿನಿಮಾಸ್ಯಾಂಡಲ್ ವುಡ್

ವಿಕ್ರಾಂತ್ ರೋಣ ಟೀಸರ್ ನೋಡಿ ಅಭಿಮಾನಿಗಳು ಬಹುಪರಾಕ್

ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷೆಯ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆಗೆ ಸಿದ್ಧವಾಗಿದೆ. ಯುಗಾದಿ ಹಬ್ಬದ ಪ್ರಯುಕ್ತ ಬೆಳಗ್ಗೆ 9.55 ಕ್ಕೆ ಈ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಹಲವು ಭಾಷೆಯ ಸ್ಟಾರ್ ನಟರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್ ಮಾಡಿದ್ದಾರೆ. ಈ ಮೂಲಕ ಅವರು ಸಿನಿಮಾ ದಿನಾಂಕವನ್ನು ಘೋಷಿಸಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಈ ಸಿನಿಮಾ ಜು. 28ರಂದು ರಿಲೀಸ್ ಆಗಲಿದೆ. ‘ವಿಕ್ರಾಂತ್ ರೋಣ’ ಚಿತ್ರಕ್ಕೆ ‘ರಂಗಿತರಂಗ’ ಖ್ಯಾತಿಯ ಅನೂಪ್ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ ಕೋವಿಡ್ ಕಾರಣದಿಂದ ಸಿನಿಮಾ ಮುಂದೂಡಲಾಗಿತ್ತು. ಇದೀಗ ಸಿನಿಮಾದ ಮುಂದಿನ ಅಪ್ ಡೇಟ್ ಏನು ಎಂದು ಅಭಿಮಾನಿಗಳು ಕಾಯುತ್ತಿದ್ದರು. ಅವರಿಗೆಲ್ಲ ಈ ಟೀಸರ್ ಮೂಲಕ ಚಿತ್ರತಂಡ ಗುಡ್ ನ್ಯೂಸ್ ನೀಡಿದೆ.

ಜು. 28ಕ್ಕೆ ವಿಕ್ರಾಂತ್ ರೋಣ ವಿಶ್ವಾದಾದ್ಯಂತ ಗ್ರ್ಯಾಂಡ್ ಆಗಿ ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಸುದೀಪ್ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ವಿಕ್ರಾಂತ್ ರೋಣ’ ಸಿನಿಮಾ 3ಡಿ ವರ್ಷನ್ನಲ್ಲಿ ಸಿದ್ಧವಾಗಿದೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ, ತೆಲುಗು ಮತ್ತು ಇಂಗ್ಲಿಷ್ನಲ್ಲಿಯೂ ಈ ಚಿತ್ರ ಬಿಡುಗಡೆ ಆಗಲಿದೆ. ತಮಿಳಿನಲ್ಲಿ ಸಿಂಬು, ಮಲಯಾಳಂನಲ್ಲಿ ಮೋಹನ್ ಲಾಲ್, ಹಿಂದಿಯಲ್ಲಿ ಸಲ್ಮಾನ್ ಖಾನ್, ತೆಲುಗಿನಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಹಾಗೂ ಇಂಗ್ಲಿಷ್ನಲ್ಲಿ ವೀರೇಂದ್ರ ಸೆಹ್ವಾಗ್ ಅವರು ‘ವಿಕ್ರಾಂತ್ ರೋಣ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಎಲ್ಲರಿಗೂ ಕಿಚ್ಚ ಸುದೀಪ್ ಅವರು ಧನ್ಯವಾದ ಅರ್ಪಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button