Breaking NewsLatestರಾಜ್ಯಸುದ್ದಿ

ವಾಯುಭಾರ ಕುಸಿತ ಹಿನ್ನೆಲೆ; ರಾಜ್ಯದಲ್ಲಿ ಇಂದು, ನಾಳೆ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸಾಧ್ಯತೆ ಇದೆ. ಇಂದು ಕೋಲಾರ, ಚಿಕ್ಕಮಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ದಕ್ಷಿಣ ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ವಾಯುಭಾರ ಕುಸಿತವಾಗಿದೆ. ಈ ಬಗ್ಗೆ ಎರಡು ದಿನ ಮುಂಚಿತವಾಗಿ ಮಾಹಿತಿ ನೀಡಿದ್ದ ಹವಾಮಾನ ಇಲಾಖೆ, ವಾಯುಭಾರ ಕುಸಿತದ ಪ್ರಭಾವ ವಾಯುವ್ಯ ದಿಕ್ಕಿನಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯ ಉತ್ತರ ತಮಿಳುನಾಡು ಕರಾವಳಿಯ ಕಡೆಗೆ ಸಾಗಲಿದೆ ಎಂದು ಹೇಳಿತ್ತು.ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಕೂಡ ಎರಡು ದಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button