ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸಿ : ಸರ್ಕಾರಕ್ಕೆ ಸಂಸದ ಪ್ರತಾಪ್ ಸಿಂಹ ಮನವಿ

ಮೈಸೂರು : ಸರ್ಕಾರದ ವೀಕೆಂಡ್ ಕರ್ಫ್ಯೂ ಮತ್ತು ಲಾಕ್ ಡೌನ್ ನ್ನು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಕಳೆದ ಎರಡು ವರ್ಷಗಳಿಂದಲೂ ಜನರು ತುಂಬಾ ನೊಂದಿದ್ದಾರೆ. ಹೆಚ್ಚಿನ ಜನ ಲಸಿಕೆ ತೆಗೆದುಕೊಂಡಿದ್ದಾರೆ. ಆದ್ದರಿಂದ ಈ ಸಂದರ್ಭದಲ್ಲಿ ಲಾಕ್ಡೌನ್ ಕರ್ಫ್ಯೂ ಮಾಡುವುದು ಬೇಡ. ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲಿ ರ್ಯಾಲಿಗಳು, ಪ್ರಚಾರಗಳು ನಡೆಯುತ್ತಿವೆ. ಹೀಗಿರುವಾಗ ಕರ್ನಾಟಕದಲ್ಲಿ ಲಾಕ್ಡೌನ್, ವೀಕೆಂಡ್ ಕರ್ಫ್ಯೂ ಏಕೆ ಬೇಕು ಎಂದು ಸರ್ಕಾರವನ್ನು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಚಾರದಲ್ಲಿ ಸರ್ಕಾರ ಜನರನ್ನು ಭೀತಿಗೊಳಿಸುವುದನ್ನ ನಿಲ್ಲಿಸಬೇಕು. ಜನರ ಜೀವ ಮತ್ತು ಜೀವನ ಎರಡು ಮುಖ್ಯ. ಜೀವ ಉಳಿಸಿಕೊಳ್ಳಲು ಲಸಿಕೆ ಕೊಟ್ಟಾಗಿದೆ. ಈ ಸಂದರ್ಭದಲ್ಲಿ ಕರ್ಫ್ಯೂ, ಲಾಕ್ಡೌನ್ ತೆರೆಯಿರಿ ಎಂದು ಮನವಿ ಮಾಡಿದರು.
ಈ ಬಗ್ಗೆ ಶುಕ್ರವಾರದ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಕೇಂಡ್ ಲಾಕ್ಡೌನ್ ತೆರವುಗೊಳಿಸಿ ಎಂದರು.
ಗಣರಾಜ್ಯೋತ್ಸವ ಪರೇಡ್ನಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗದಿದ್ದಕ್ಕೆ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಇದಕ್ಕೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಕಾಮಾಲೆ ಕಣ್ಣಿಗೆ ಕಾಣುವುದೆಲ್ಲ ಹಳದಿಯಾಗಿ ಕಾಣುತ್ತದೆ ಎಂಬ ರೀತಿಯಲ್ಲಿ ಸಿದ್ದರಾಮಯ್ಯ ವರ್ತನೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕ್ಯಾಂಟೀನ್ಗೆ ಹೆಸರಿಡುವಾಗ ಈ ಮಹಾಪುರುಷರ ಹೆಸರು ನೆನಪಾಗಲಿಲ್ಲ. ಆಗ ನೆನಪಾಗಿದ್ದು ಇಂದಿರಾಗಾಂಧಿ ಮಾತ್ರ. ಅಧಿಕಾರ ಇದ್ದಾಗ ಸಿದ್ದರಾಮಯ್ಯನವರಿಗೆ ನಾಯರಣ ಗುರು, ಒನಕೆ ಓಬವ್ವ, ಮೈಸೂರು ಮಹಾರಾಜರು, ನೆನಪಾಗಲಿಲ್ಲ. ಈಗ ನೆನಪಾಗುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಗಣರಾಜ್ಯೋತ್ಸವದಲ್ಲಿ ಒಂದು ವಿಷಯ ಕೊಟ್ಟಿರುತ್ತಾರೆ. ಆ ವಿಷಯಕ್ಕೆ ಅನುಗುಣವಾಗಿ ಯಾರು ಸ್ತಬ್ದ ಚಿತ್ರ ಮಾಡಿರುತ್ತಾರೋ ಅದರ ಗುಣಮಟ್ಟದ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು.
