
Train Accident ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ. ಬಿಕನೇರ್ -ಗೌಹಾಟಿ ಎಕ್ಸ್ಪ್ರೆಸ್ ರೈಲು ಕಳೆದ ರಾತ್ರಿ ಅಪಘಾತಕ್ಕಿಡಾಗಿದೆ. ಮೃತಪಟ್ಟವರ ಪೈಕಿ ಮೂವರನ್ನುಇನ್ನು ಗುರುತಿಸಲಾಗಿಲ್ಲ. ರೈಲಿನ 11 ಬೋಗಿಗಳು ಉರುಳಿಬಿದ್ದು45 ಜನರಿಗೆ ಗಾಯಗಳಾಗಿವೆ.
ಘಟನೆಯ ಬಗ್ಗೆ ರೈಲ್ವೆ ಸುರಕ್ಷತಾ ಕಮಿಷನರ್ ತನಿಖೆ ನಡೆಸಲಿದ್ದಾರೆ ಎಂದು ಇಲಾಖೆ ಅಧಿಕಾರಿಗಳು ಹೇಳಿದ್ದಾರೆ ಗಾಯಗೊಂಡವರನ್ನು ಜಲ್ಪೈಗುರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳದಿಂದ ನಾಲ್ವರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಈ ನಡುವೆ ದುರಂತದಲ್ಲಿ ಮೃತಪಟ್ಟ ವರಿಗೆ 5 ಲಕ್ಷರೂ. ಗಂಭೀರ ಗಾಯಗೊಂಡವರಿಗೆ 1 ಲಕ್ಷರೂ ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ ತಲಾ 25ಸಾವಿರ ರೂ ಪರಿಹಾರವನ್ನು ರೈಲ್ವೆ ಇಲಾಖೆ ಪ್ರಕಟಿಸಿದೆ.
ರಾಷ್ಟ್ರಪತಿ , ಉಪರಾಷ್ಟ್ರಪತಿ, ಪ್ರಧಾನಿ ಹಾಗೂ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಪಘಾತದ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಪರಿಹಾರ ಕಾರ್ಯಚರಣೆಗಾಗಿ ರಾಜಸ್ತಾನದ ಮುಖ್ಯಮಂತ್ರಿ ಅಶೋಕ್ ಗೆಲ್ಲೋಟ್ ಇಬ್ಬರು ಸಚಿವರನ್ನು ದುರಂತ ನಡೆದ ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದಾರೆ.ಥ



