Breaking NewsLatestಉತ್ತರ ಕನ್ನಡಜಿಲ್ಲಾ ಸುದ್ದಿ

ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಡಾ.ಜಿ.ಎಲ್.ಹೆಗಡೆ ನೇಮಕ

ಕಾರವಾರ : ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕರನ್ನಾಗಿ ಹಿರಿಯ ಅರ್ಥಧಾರಿ, ಸಾಹಿತಿ ಡಾ.ಜಿ.ಎಲ್.ಹೆಗಡೆ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಯಕ್ಷಗಾನ ವೇಷಧಾರಿಯಾಗಷ್ಟೇ ಅಲ್ಲ, ದಕ್ಷಿಣೋತ್ತರ ಕನ್ನಡದ ಪ್ರಸಿದ್ಧ ಯಕ್ಷಗಾನ, ತಾಳಮದ್ದಳೆ,ಅರ್ಥಧಾರಿಯಾಗಿಯೂ ಹೆಸರು ಮಾಡಿರುವ ಡಾ.ಜಿ.ಎಲ್. ಹೆಗಡೆಯವರು ಕುಮಟಾದ ಡಾ.ಎ.ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

ಡಾ.ಜಿ.ಎಲ್.ಹೆಗಡೆ ಯಕ್ಷಗಾನ ಸಂಶೋಧನಾ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದವರು.ಯಕ್ಷಗಾನ ವರ್ಣ ವೈಭವ,ಶೇಣಿ ರಾಮಾಯಣ,ಶೇಣಿ ಭಾರತ,ನಮ್ಮ ಚಿಟ್ಟಾಣಿ ಸೇರಿದಂತೆ ಹಲವು ಪುಸ್ತಕಗಳನ್ನು ಅವರು ಬರೆದಿದ್ದಾರೆ.

ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ಎಂ.ಎ.ಹೆಗಡೆ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಡಾ.ಜಿ.ಎಲ್.ಹೆಗಡೆ ಅವರನ್ನು ನೇಮಕ ಮಾಡಿ ಕನ್ನಡ ಹಾಗೂ ಸಂಸ್ಕ್ರತಿ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button