ಈಶ್ವರಪ್ಪ ಪ್ರತಿಕೃತಿ ಧಹಿಸಿ ಯುಥ್ ಕಾಂಗ್ರೆಸ್ ಆಕ್ರೋಶ: ರಾಜಿನಾಮೆ ನೀಡಲು ಅಗ್ರಹ

ಹುಬ್ಬಳ್ಳಿ: ಸಚಿವ ಕೆ.ಎಸ್.ಈಶ್ವರಪ್ಪನವರ ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಬಹುದು ಎಂಬ ಹೇಳಿಕೆಯನ್ನು ಖಂಡಿಸಿ ಯುಥ್ ಕಾಂಗ್ರೆಸ್ ಕಾರ್ಯಕರ್ತರು ಬೀದಿಗೆ ಪ್ರತಿಭಟನೆ ನಡೆಸಿರು. ತಕ್ಷಣವೇ ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಚಿವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಿದರು.
ದೇಶಪಾಂಡೆ ನಗರದಲ್ಲಿರುವ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಸ್ಥಳೀಯ ಕಾಂಗ್ರೆಸ್ ನಾಯಕರು ಹಾಗೂ ಯುಥ್ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ವಿರುದ್ಧ ದಿಕ್ಕಾರ ಕೂಗಿದರು.
ಕೆಂಪು ಕೋಟೆ ಧ್ವಜಾರೋಹಣವು ತನ್ನದೆ ಆದ ಇತಿಹಾಸವನ್ನು ಹೊಂದಿದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸಚಿವ ಕೆ ಎಸ್ ಈಶ್ವರಪ್ಪನವರು ಕೆಂಪು ಕೋಟೆಯ ಮೇಲೆ ನೂರು ವರ್ಷಗಳ ಬಳಿಕ ಕೇಸರಿ ಧ್ವಜ ಹಾರಬಹುದು ಎಂದು ಹೇಳಿಕೆ ನೀಡಿದ್ದಾರೆ. ಸಚಿವರಾಗಿದ್ದುಕೊಂಡು ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದು ಎಷ್ಟರಮಟ್ಟಿಗೆ ಸರಿ? ಇಂತಹ ವಿವಾದಾತ್ಮಕ ಹೇಳಿಕೆ ನೀಡಲು ಇವರಿಗೆ ಹೇಗೆ ಮನಸ್ಸು ಬರುತ್ತೆ. ಬಿಜೆಪಿಯವರು ವಿವಾದಗಳನ್ನು ಹುಟ್ಟು ಹಾಕುವುದರಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅದಕ್ಕೆ ತಾಜಾ ಉದಹಾರಣೆ ಕೆ ಎಸ್ ಈಶ್ವರಪ್ಪನವರ ಹೇಳಿಕೆಯಾಗಿದೆ. ಈ ಕುರಿತಾಗಿ ಕೆ ಎಸ್ ಈಶ್ವರಪ್ಪನವರು ದೇಶದ ಇನತೆಯ ಕ್ಷಮೆ ಕೇಳಬೇಕು. ಜೊತೆಗೆ ತಮ್ಮ ಸಚಿವ ಸ್ಥಾನಕ್ಕೆ ಈ ಕೂಡಲೇ ರಾಜಿನಾಮೆ ನೀಡಬೇಕು ಎಂದು ಅಗ್ರಹಿಸಿದರು.
ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿರುವ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕ್ರಮ ಕೈಗೊಳ್ಳಬೇಕು. ಬೇಜವಾಬ್ದಾರಿ ಹೇಳಿಕೆ ನೀಡುವ ಸಚಿವ ಈಶ್ವರಪ್ಪನವರನ್ನು ಸಂಪುಟದಿಂದ ಕೈಬೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.



