
ಶ್ರೀನಗರ: ಈ ವರ್ಷದ ಅಮರನಾಥ ಯಾತ್ರೆಯು ಹಿಂದಿಗಿಂತ ಎರಡು ಪಟ್ಟು ಹೆಚ್ಚು ಜನರಿಂದ ಕೂಡಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಆಡಳಿತವು ಸುಮಾರು 8 ಲಕ್ಷ ಯಾತ್ರಾರ್ಥಿಗಳನ್ನು ದಕ್ಷಿಣದಲ್ಲಿರುವ ಗುಹಾ ದೇಗುಲಕ್ಕೆ ಸ್ವಾಗತಿಲು ಸಿದ್ಧತೆ ನಡೆಸಿದೆ.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಅಪೂರ್ವ ಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎರಡು ವರ್ಷಗಳ ನಂತರ ನಡೆಯಲಿರುವ ಯಾತ್ರೆಯ ವ್ಯವಸ್ಥೆಗಳ ಕುರಿತು ಚರ್ಚಿಸಲಾಯಿತು.
ಜಮ್ಮು ಮತ್ತು ಕಾಶ್ಮೀರ ಮುಖ್ಯ ಕಾರ್ಯದರ್ಶಿ ಅರುಣ್ಕುಮಾರ್, ವಿಭಾಗೀಯ ಮುಖ್ಯಸ್ಥರು ಮತ್ತು ಜಿಲ್ಲಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಈ ಬಾರಿ 6ರಿಂದ 8 ಲಕ್ಷ ಜನ ಯಾತ್ರಿಗಳು ಗುಹಾ ದೇಗುಲಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಕಾರ್ಯದರ್ಶಿ ಮಾಹಿತಿ ನೀಡಿದರು.




