
ಬೆಂಗಳೂರು: ಬುಲೆಟ್ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಹಾಗೂ ಹಿಂಬದಿ ಸವಾರ ಸಾವನ್ನಪ್ಪಿರುವ ಘಟನೆ ಬ್ಯಾಟರಾಯನಪುರ ಜಂಕ್ಷನ್ ಬಳಿ ನಡೆದಿದೆ. ಮೃತ ಯುವಕ ಕಿರಣ್ ಎಂದು ತಿಳಿದು ಬಂದಿದ್ದು ಮತ್ತೊಬ್ಬರ ಹೆಸರು ಪತ್ತೆಯಾಗಬೇಕಿದೆ. ನಸುಕಿನ ವೇಳೆಯಲ್ಲಿ ಬುಲೆಟ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು ಅತೀ ವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಹೆಬ್ಬಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.




