
ನವದೆಹಲಿ: ದೇಶದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 1,07,474 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇನ್ನು 2,13,246 ರಷ್ಟು ಸೋಂಕಿತರು ಗುಣಮುಖರಾಗಿದ್ದು, 865 ಸಾವನ್ನಪ್ಪಿರುವುದು ವರದಿಯಾಗಿವೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,31,648ಕ್ಕೆ ಏರಿಕೆಯಾಗಿದೆ.ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,69,46,26,697 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.




