ರಾಷ್ಟ್ರೀಯಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಪ್ರತ್ಯೇಕ ಎನ್​ಕೌಂಟರ್: 5 ಭಯೋತ್ವಾದಕರ ಹತ್ಯೆ

ಜಮ್ಮು-ಕಾಶ್ಮೀರದ ಬುದ್​ಗಾಂವ್ ಹಾಗೂ ಪುಲ್ವಾಮಾದಲ್ಲಿ ರಕ್ಷಣಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಎನ್​ಕೌಂಟರ್​ನಲ್ಲಿ 5 ಉಗ್ರನ್ನ ಹತ್ಯೆ ಮಾಡಲಾಗಿದೆ ಎಂದು ಜುಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಹತ್ಯೆಯಾದ ಉಗ್ರರು ಪಾಕಿಸ್ತಾನ ಮೂಲಕ ಲಷ್ಕರ್ ಇ ತೊಯ್ಬಾ ಹಾಗೂ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರು ಎಂದು ಕಾಶ್ಮೀರದ ಐಜಿ ವಿಜಯ್ ಕುಮಾರ್ ತಿಳಿಸಿದ್ದಾರೆ.

12 ಗಂಟೆಗಳ ಕಾರ್ಯಾಚರಣೆಯಲ್ಲಿ ಪುಲ್ವಾಮಾ ಜಿಲ್ಲೆಯ ನೈರಾ ಪ್ರದೇಶದಲ್ಲಿ ನಾಲ್ವರು ಭಯೋತ್ವಾದಕರು ಹಾಗೂ ಬದ್ಗಾಮ್​ನ ಚ್ರಾರ್​ ಇ ಶರೀಫ್ ಪ್ರದೇಶದಲ್ಲಿ ಓರ್ವ ಉಗ್ರನನ್ನ ಹೊಡೆದುರುಳಿಸಲಾಗಿದೆ. ಇದು ಭದ್ರತಾಪಡೆಗಳಿಗೆ ಸಿಕ್ಕ ಬಹುದೊಡ್ಡ ಯಶಸ್ಸು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಎನ್​ಕೌಂಟರ್ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಮದ್ದು ಗುಂಡುಗಳು ಸೇರಿದಂತೆ ಹಲವು ಸಾಮಾಗ್ರಿಗಳನ್ನ ವಶಕ್ಕೆ ಪಡೆಯಲಾಗಿದೆ. ಈ ತಿಂಗಳಲ್ಲಿ ಒಟ್ಟು 11 ಎನ್​ಕೌಂಟರ್ ನಡೆದಿದ್ದು 21 ಭಯೋತ್ವಾದಕರನ್ನ ಹತ್ಯೆ ಮಾಡಲಾಗಿದೆ. ಅದರಲ್ಲಿ ಒಟ್ಟು ಎಂಟು ಮಂದಿ ಪಾಕಿಸ್ತಾನಿ ಭಯೋತ್ವಾದಕರೇ ಆಗಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button