
ನವದೆಹಲಿ: ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ತೆಲಂಗಾಣ ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ ಬುಧವಾರ ತಳ್ಳಿಹಾಕಿದ್ದಾರೆ.
ಕಾಂಗ್ರೆಸ್ ಪಕ್ಷವು ಬೇರೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು, ಆದರೆ TRS ನ ಜೊತೆಗೆ ಮಾತ್ರ ಸಾಧ್ಯವಿಲ್ಲ. ಏಕೆಂದರೆ ಆ ಪಕ್ಷದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನಂಬಿಕೆಗೆ ಅರ್ಹರಾದ ವ್ಯಕ್ತಿಯಲ್ಲ ಎಂದು ಹೇಳಿದ್ದಾರೆ.
ನಾವು ಅವರನ್ನು 2004, 2009, 2014 ಮತ್ತು 2019ರಲ್ಲಿ ನೋಡಿದ್ದೇವೆ. ಆದ್ದರಿಂದ ನಾವು ಬೇರಾವುದೇ ನಾಯಕ ಅಥವ ಪಕ್ಷವನ್ನು ನಂಬಬಹುದು ಆದರೆ KCR ಮತ್ತು TSR ಅಲ್ಲ ಎಂದು ರೆಡ್ಡಿ ತಿಳಿಸಿದ್ದಾರೆ. KCR ಭವಿಷ್ಯದಲ್ಲಿ ರಾಷ್ಟ್ರ ರಾಜಕಾರಣಕ್ಕೆ ಇಳಿಯಲು ಯೋಚಿಸುತ್ತಿರುವುದರಿಂದ ಅವರು ಬಿಜೆಪಿ ವಿರೋಧಿ ಪಕ್ಷಗಳನ್ನು ಒಂದೇ ವೇದಿಕೆಯಲ್ಲಿ ತರಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ರೆಡ್ಡಿ ಅವರ ಹೇಳಿಕೆಯು ಮಹತ್ವ ಪಡೆದುಕೊಳ್ಳುತ್ತದೆ.




