ರಾಷ್ಟ್ರೀಯ
ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು

ನವದೆಹಲಿ: ಸಿಬಿಎಸ್ಇ 12ನೇ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಕುರಿತು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ.
ಇಮದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಿಬಿಎಸ್‌ಇ ಫಲಿತಾಂಶಗಳನ್ನು ಘೋಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಭೆಯ ಬಳಿಕ ಸ್ಪಷ್ಟಪಡಿಸಲಾಗಿದೆ.
ಕಳೆದ ವರ್ಷದ ಮಾದರಿಯಲ್ಲಿ ಯಾವುದೇ ವಿದ್ಯಾರ್ಥಿ ಪರೀಕ್ಷೆ ತೆಗೆದುಕೊಳ್ಳಲು ಬಯಸಿದರೆ ಆ ಆಯ್ಕೆಯನ್ನು ಸಹ ನೀಡಲಾಗುತ್ತದೆ. ಪರೀಕ್ಷೆಯನ್ನು ಯಾವಾಗ ನಡೆಸಲಾಗುತ್ತದೆ ಎಂಬುದನ್ನು ಬಳಿಕ ತಿಳಿಸಲಾಗುವುದೆಂದು ಹೇಳಲಾಗಿದೆ.




