ರಾಷ್ಟ್ರೀಯ
ಕೋವಿಡ್ ನಿಯಂತ್ರಣಕ್ಕೆ ಪಣತೊಟ್ಟ ಕೇರಳ; ಮತ್ತೆ 20 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಣೆ

ಕೋವಿಡ್ ಸಂಪೂರ್ಣ ನಿಯಂತ್ರಣಕ್ಕೆ ಪಣ ತೊಟ್ಟಂತಿರುವ ಕೇರಳ ಸರ್ಕಾರ ಕೊರೋನಪೀಡಿತರಿಗೆ ಸೂಕ್ತ ಚಿಕಿತ್ಸೆ, ಕೋವಿಡ್ ಲಸಿಕೆ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಕಳೆದ ಬಾರಿಯಂತೆ ಈಗ ಮತ್ತೊಮ್ಮೆ ರೂ.20 ಸಾವಿರ ಕೋಟಿ ರೂಪಾಯಿ ಪ್ಯಾಕೇಜನ್ನು ಕೇರಳ ಸರ್ಕಾರ ಘೋಷಿಸಿದೆ.
ಪಿಣರಾಯಿ ವಿಜಯನ್ ಸರ್ಕಾರದ ಎರಡನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಿದ್ದು ವಿತ್ತ ಸಚಿವ ಕೆ.ಎನ್.ಬಾಲಗೋಪಾಲ್ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಕೊರೋನಾ 3ನೇ ಅಲೆಯ ಸಾಧ್ಯತೆಯಿದ್ದು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.




