ರಾಜ್ಯ
ಎಂಟು ಜಿಲ್ಲೆಗಳಲ್ಲಿ ಲಾಕ್ಡೌನ್ ಮತ್ತೆ ವಿಸ್ತರಣೆ?

ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿರುವ 8 ಜಿಲ್ಲೆಗಳಲ್ಲಿ ಜೂ.14ರ ನಂತರವೂ ಲಾಕ್ಡೌನ್ ಮತ್ತೆ ಒಂದು ವಾರಗಳ ಕಾಲ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ.
ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಲಾಕ್ಡೌನ್ ಅನ್ನು ವಿಸ್ತರಿಸುವಂತೆ ಒತ್ತಾಯಿಸಿದ ನಂತರ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ತುಮಕೂರು, ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಲಾಕ್ಡೌನ್ ಒಂದು ವಾರ ವಿಸ್ತರಿಸಲಾಗುವುದು ಎನ್ನಲಾಗಿದೆ. ಈ ಜಿಲ್ಲೆಗಳಲ್ಲಿ ಕೊವೀಡ್ ಪರಿಸ್ಥಿತಿ ಅವಲೋಕಿಸಿ ಲಾಕ್ಡೌನ್ ಸಡಿಲಗೊಳಿಸುವಂತೆ ಜಿಲ್ಲಾಧಿಕಾರಿ ಮತ್ತು ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ.




