ರಾಜ್ಯ

ಸರ್ಕಾರಿ ಜಾಗದ ಮನೆಗಳ ಸಕ್ರಮಾತಿಗೆ ಕಾಲಾವಕಾಶ

ಕರ್ನಾಟಕ ಭೂ ಕಂದಾಯ ಕಾಯ್ದೆಯ ಕಲಂ 94-ಸಿ ಮತ್ತು 94-ಸಿಸಿ ಅಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕಳೆದ 2015ರ ಜ.1ಕ್ಕಿಂತ ಮೊದಲು ಅನಧಿಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸಲು ಅವಕಾಶ ಒದಗಿಸಲಾಗಿದ್ದು, ಅರ್ಜಿ ಸಲ್ಲಿಸಲು 2022ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಅರ್ಜಿಗಳು ಸಲ್ಲಿಕೆಯಾದ ನಂತರ ದಾಖಲಾತಿಗಳನ್ನು ಪರಿಶೀಲಿಸಿ ನಂತರ ಫಲಾನುಭವಿಗಳಿಗೆ 2023ರ ಮಾರ್ಚ್ 31ರೊಳಗೆ ಹಕ್ಕುಪತ್ರ ವಿತರಿಸಲಾಗುತ್ತದೆ. ರಾಜ್ಯದೆಲ್ಲಡೆ ಸರ್ಕಾರಿ ಜಾಗಗಳಲ್ಲಿ ನೆಲೆಸಿದವರಿದ್ದಾರೆ. ಕಾಯ್ದೆ ಮೂಲಕ ಅವುಗಳನ್ನು ಸಕ್ರಮ ಮಾಡಿಕೊಳ್ಳಲು ಅವಕಾಶವಿದೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Spread the love

Related Articles

Leave a Reply

Your email address will not be published. Required fields are marked *

Back to top button