ರಾಷ್ಟ್ರೀಯಸುದ್ದಿ

ಇಂದು ಮಹಾತ್ಮ ಗಾಂಧೀಜಿ ಪುಣ್ಯತಿಥಿ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್

ತಿರುವನಂತಪುರ: ಇಂದು ಮಹಾತ್ಮ ಗಾಂಧೀಜಿ ಪುಣ್ಯತಿಥಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ. ಧರ್ಮದ ಹೆಸರಿನಲ್ಲಿ ಇಂದಿಗೂ ಜನರನ್ನು ಹತ್ಯೆ ಮಾಡುವ ಶಕ್ತಿಗಳೇ ಮಹಾತ್ಮಗಾಂಧಿ ಅವರನ್ನು ಹತ್ಯೆಗೈದಿವೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಇನ್ನು ಬಾಪುವನ್ನು ಕೊಂದ ಶಕ್ತಿಗಳೇ ಇಂದು ಧರ್ಮದ ಹೆಸರಲ್ಲಿ ಹತ್ಯೆ ಮಾಡುತ್ತಿದ್ದಾರೆ. ಅವರು ಇಂದು ನಮ್ಮ ದೇಶಕ್ಕೆ ದೊಡ್ಡ ಬೆದರಿಕೆಯಾಗಿದ್ದಾರೆ. ಹುತಾತ್ಮರ ದಿನದಂದು ಕೋಮುವಾದದ ವಿರುದ್ಧ ಹೋರಾಡಲು ಮತ್ತು ಭ್ರಾತೃತ್ವವನ್ನು ಸಾರೋಣ ಎಂದರು.

ಇಂದು ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿ. ದೇಶಾದ್ಯಂತ ಅವರನ್ನು ಸ್ಮರಿಸುತ್ತಿದ್ದಾರೆ. ಜೊತೆಗೆ ಭಾರತದ ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದ ಹೋರಾಟಗಾರರ ಸ್ಮರಣೆಗಾಗಿ ದೇಶದಾದ್ಯಂತ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ.

Spread the love

Related Articles

Leave a Reply

Your email address will not be published. Required fields are marked *

Back to top button