ಜಿಲ್ಲಾ ಸುದ್ದಿಮೈಸೂರುರಾಜಕೀಯರಾಜ್ಯಸುದ್ದಿ
ನಾಳೆಯಿಂದ ಉಪ ಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ: ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು: ನಾಳೆಯಿಂದ ಉಪ ಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ದಸರಾ ಅತ್ಯಂತ ಯಶಸ್ವಿಯಾಗಿ ಮುಕ್ತಾಯವಾಗಿದೆ. ಮುಂದಿನ ವರ್ಷ ಅದ್ದೂರಿಯಾಗಿ ದಸರಾ ನಡೆಸುತ್ತೇವೆ. ನಿನ್ನೆ ಐತಿಹಾಸಿಕ ಜಂಬೂ ಸವಾರಿ ಯಶಸ್ವಿ ಬಳಿಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ತೆರೆಬಿದ್ದಿತು.
ಮೈಸೂರಿನ ಜನತೆಗೆ ವಿಶೇಷ ಅಭಿನಂದನೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಒಳ್ಳೆಯ ರೀತಿಯಲ್ಲಿ ದಸರಾ ಸಂಧರ್ಭದಲ್ಲಿ ಟೂರಿಸಂ ಸರ್ಕ್ಯೂಟಿ ಮಾಡುತ್ತೇವೆ. ದಸರಾ ವಸ್ತು ಪ್ರದರ್ಶನವನ್ನ 365 ದಿನ ಬಳಕೆ ಮಾಡಲು ಚಿಂತನೆ ನಡೆಸಿದೆ. ಇದಕ್ಕೆ ಎಲ್ಲರ ಜೊತೆ ಕುಳಿತು ಮಾತುಕತೆ ನಡೆಸುತ್ತೇನೆ ಎಂದು ಸಿಎಂ ಹೇಳಿದರು.




