ರಾಜಕೀಯರಾಜ್ಯ

ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿ; ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಇದೇ 11 ರಂದು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿದ್ದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಚುನಾವಣಾ ಆಯೋಗದ ನಿದೇರ್ಶನದ ಪ್ರಕಾರ ನೀತಿ ಸಂಹಿತೆ ಜಾರಿಯಲಿದ್ದಾಗ ಯಾವುದೇ ರೀತಿಯ ಸರಕಾರಿ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂಬ ನಿಯಮವಿದೆ.

ಹೀಗಾಗಿ ಇದೇ 11 ರಂದು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿದ್ದ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಸದ್ಯದಲ್ಲೇ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button