
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಥಣಿ ಆರ್ಎಸ್ಎಸ್ನ ಹಿರಿಯ ಮುಖಂಡರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಕರ್ನಾಟಕದ ಪ್ರಾಂತದ ಆರ್ಎಸ್ಎಸ್ ಹಿರಿಯ ಮುಖಂಡರಾದ ಅರವಿಂದ್ ರಾವ್ ದೇಶಪಾಂಡೆ ಅವರನ್ನು ಅಥಣಿ ಪಟ್ಟಣದ ಅವರ ನಿವಾಸದಲ್ಲಿ ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಮಾಡಿ, ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿ ಎಲ್ಲರ ಗಮನ ಸೆಳದಿದ್ದಾರೆ.
ಇಂದು ಬೆಳಗಿನ ಜಾವ ಅಥಣಿಗೆ ಆಗಮಿಸಿದ ರಮೇಶ್ ಜಾರಕಿಹೊಳಿ ಅರವಿಂದ್ ರಾವ್ ದೇಶಪಾಂಡೆ ಅವರನ್ನು ಭೇಟಿ ಮಾಡಿದ್ದಾರೆ, ಎರಡು ಗಂಟೆಗಳಿಗೂ ಹೆಚ್ಚು ಕಾಲ ಅವರ ಜೊತೆ ಚರ್ಚೆ ಮಾಡಿದ್ದಾರೆ. ಯಾವ ವಿಷಯದ ಕುರಿತು ಚರ್ಚೆ ಮಾಡಿದ್ದಾರೆ ಎಂದು ಇದುವರೆಗೂ ಗುಟ್ಟು ಮಾತ್ರ ಬಿಟ್ಟುಕೊಟ್ಟಿಲ್ಲಾ ಇನ್ನು ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಲು ಕೂಡ ನಿರಾಕರಿಸಿದ್ದಾರೆ.
ದಿನದಿಂದ ದಿನಕ್ಕೆ ತೀವ್ರವಾಗಿ ಓಡಾಡುತ್ತಿರುವ ರಮೇಶ್ ಜಾರಕಿಹೊಳಿ ತಮ್ಮ ದಾಳವನ್ನು ಯಶಸ್ವಿ ಆಗಿಸುತ್ತರಾ ಎಂದು ಕಾದು ನೋಡಬೇಕಿದೆ.



